ನವದೆಹಲಿ: ಕೊರೊನಾ ಸೋಂಕು ಹರಡುವಿಕೆ ತಡೆಯಲು ವಿಧಿಸಲಾದ ಲಾಕ್ಡೌನ್, ವಾಹನಗಳ ಸಂಚಾರದ ಮೇಲಿನ ನಿರ್ಬಂಧ ಕ್ರಮಗಳು ಲಸಿಕೆ ನೀಡುವುದು ಸೇರಿದಂತೆ ಚಿಕಿತ್ಸೆ ಸೇವೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರದಂತೆ ಎಚ್ಚರವಹಿಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಲಹೆ ಮಾಡಿದೆ.

ಈ ಕುರಿತು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರವನ್ನು ಬರೆದಿರುವ ಆರೋಗ್ಯ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಮನೋಹರ್ ಅಗ್ನಾನಿ ಅವರು, ರಾತ್ರಿ ಕರ್ಫ್ಯೂ, ಲಾಕ್ಡೌನ್ ಸೇರಿ ವಿವಿಧ ರಾಜ್ಯಗಳಲ್ಲಿ ವಿವಿಧ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.

ಆದರೆ, ಈ ಕ್ರಮಗಳಿಂದ ಲಸಿಕೆ ಅಭಿಯಾನಕ್ಕೆ ಯಾವುದೇ ರೀತಿ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಫಲಾನುಭವಿಗಳು ಲಸಿಕೆ ಪಡೆಯಲು ಕೇಂದ್ರಗಳತ್ತ ತೆರಳಲು ಸಮಸ್ಯೆಯಾಗದಂತೆ ಕ್ರಮವಹಿಸಬೇಕು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.