ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ವಿದೇಶದಿಂದ ಬಂದ 12 ಪ್ರಯಾಣಿಕರಲ್ಲಿ ಕೊರೊನಾ ಸೋಂಕು– ಓಮೈಕ್ರಾನ್‌ ಶಂಕೆ

Last Updated 4 ಡಿಸೆಂಬರ್ 2021, 1:44 IST
ಅಕ್ಷರ ಗಾತ್ರ

ನವದೆಹಲಿ: ಕಳೆದ ಮೂರು ದಿನಗಳಿಂದ ಅಂತರರಾಷ್ಟ್ರೀಯ ವಿಮಾನಗಳಲ್ಲಿ ಇಲ್ಲಿಗೆ ಆಗಮಿಸಿರುವ 12ಪ್ರಯಾಣಿಕರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಕೋವಿಡ್‌ ದೃಢಪಟ್ಟಿರುವ ಎಲ್ಲಾ ಪ್ರಯಾಣಿಕರನ್ನುದೆಹಲಿಯ ಲೋಕನಾಯಕ ಜಯ‍ಪ್ರಕಾಶ್‌ ನಾರಾಯಣ(ಎಲ್‌ಎನ್‌ಜೆಪಿ) ಆಸ್ಪತ್ರೆಗೆ ದಾಖಲಿಸಿದೆ.

ಓಮೈಕ್ರಾನ್‌ ರೂಪಾಂತರದ ಕುರಿತ ಹೆಚ್ಚಿನ ಪರೀಕ್ಷೆಗಾಗಿ ಈ ಎಲ್ಲಾ 12 ಪ್ರಯಾಣಿಕರ ಮಾದರಿಗಳನ್ನು ಜಿನೋಮ್‌ ಸೀಕ್ವೆನ್ಸಿಂಗ್‌ಗೆ ಕಳುಹಿಸಲಾಗಿದೆ ಎಂದುಆಸ್ಪತ್ರೆಯ ಮೂಲಗಳು ಹೇಳಿವೆ.

ಈ ಪ್ರಯಾಣಿಕರು ಇಂಗ್ಲೆಂಡ್‌, ಫ್ರಾನ್ಸ್‌ ಹಾಗೂ ಬೆಲ್ಜಿಯಂನಿಂದ ಬಂದಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಎಲ್‌ಎನ್‌ಜೆಪಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಸುರೇಶ್ ಕುಮಾರ್ ಹೇಳಿದ್ದಾರೆ.

ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿಗೆ (ಬಿ.1.1.529) ‘ಓಮೈಕ್ರಾನ್‌’ ಎಂಬ ಹೆಸರಿಡಲಾಗಿದೆ. ಇದು ಜಗತ್ತಿನಾದ್ಯಂತ ಭಾರಿ ಕಳವಳ ಮೂಡಿಸಿದ್ದು, ಅತ್ಯಂತ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ.

ದಕ್ಷಿಣ ಆಫ್ರಿಕಾ, ಬೋಟ್ಸ್‌ವಾನಾ, ಜಿಂಬಾಬ್ವೆ, ನಮೀಬಿಯಾ ಮತ್ತು ಲೆಸೊಟೊ ದೇಶದಲ್ಲಿ ಈ ತಳಿಯ ವೈರಾಣು ತಗುಲಿರುವ ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಆಫ್ರಿಕಾದಲ್ಲಿ ಈ ತಿಂಗಳ ಆರಂಭದಿಂದ ಕೋವಿಡ್‌ ಹೊಸ ಪ್ರಕರಣಗಳ ಸಂಖ್ಯೆ ವಿಪರೀತ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಏರಿಕೆಗೆ ಓಮೈಕ್ರಾನ್‌ ತಳಿಯೇ ಕಾರಣವಾಗಿರಬಹುದು. ದಕ್ಷಿಣ ಆಫ್ರಿಕಾದ ನೆರೆಯ ದೇಶಗಳಿಗೂ ಈ ರೂಪಾಂತರ ತಳಿಯು ಹರಡಿರಬಹದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆಫ್ರಿಕಾ ಘಟಕವು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT