ಮಂಗಳವಾರ, ಜೂನ್ 15, 2021
22 °C

ಆಮ್ಲಜನಕ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಉದ್ಯಮಿ ನವನೀತ್‌ ಕಲ್ರಾ ಬಂಧನ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಆಮ್ಲಜನಕ ಅಕ್ರಮ ದಾಸ್ತಾನು ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ನವನೀತ್‌ ಕಲ್ರಾ ಅವರನ್ನು ದೆಹಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಕಲ್ರಾ ಮಾಲಿಕತ್ವದ 'ಖಾನ್‌ ಚಾಚಾ, ಟೌನ್‌ ಹಾಲ್‌ ಮತ್ತು ನೇಜ್ ಆಂಡ್‌ ಜು' ರೆಸ್ಟೊರೆಂಟ್‌ಗಳಲ್ಲಿ ಕಾನೂನು ಬಾಹೀರವಾಗಿ ಸಂಗ್ರಹಿಸಲಾಗಿದ್ದ 524 ಆಮ್ಲಜನಕ ಸಿಲಿಂಡರ್‌ಗಳನ್ನು ಮೇ 7ರಂದು ವಶಪಡಿಸಿಕೊಳ್ಳಲಾಗಿತ್ತು.

ಮೇ 7ರಿಂದ ತಲೆಮರೆಸಿಕೊಂಡಿದ್ದ ಕಲ್ರಾ ಅವರು ಬಂಧನದಿಂದ ತಪ್ಪಿಸಿಕೊಳ್ಳಲು ದೆಹಲಿ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ವಿಚಾರಣೆ ಮಾಡಿದ್ದ ನ್ಯಾಯಾಲಯವು ಕಲ್ರಾ ಅವರಿಗೆ ಜಾಮೀನು ನೀಡಲು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದ ಕಲ್ರಾ ಅವರಿಗೆ ಅಲ್ಲಿಯೂ ಜಾಮೀನು ದೊರೆತಿರಲಿಲ್ಲ.

ಗುರುಗ್ರಾಮ್‌ನ ತೋಟದ ಮನೆಯಲ್ಲಿ ಅಡಗಿಕೊಂಡಿದ್ದ ಕಲ್ರಾ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು