ಗುರುವಾರ , ಅಕ್ಟೋಬರ್ 29, 2020
26 °C

ಅನ್‌ಲಾಕ್‌ 5.0: ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿರುವ ಮಹತ್ವದ ಅಂಶಗಳೇನು?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಅಕ್ಟೋಬರ್‌ 1ರಿಂದ ಕಾರ್ಯರೂಪಕ್ಕೆ ಬರಲಿರುವ ಅನ್‌ಲಾಕ್‌ 5.0 ಮಾರ್ಗಸೂಚಿಯನ್ನು ಕೇಂದ್ರ ಗೃಹ ಸಚಿವಾಲಯವು ಪ್ರಕಟಿಸಿದೆ. 

ದೇಶದಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆಯ ಹೊರತಾಗಿಯೂ, ಅನ್‌ಲಾಕ್‌ 5.0 ಮಾರ್ಗಸೂಚಿಯಲ್ಲಿ ಹೆಚ್ಚಿನ ಸಡಿಲತೆ ಮತ್ತು ಕಡಿಮೆ ನಿರ್ಬಂಧಗಳಿವೆ ಎಂದು ಗೃಹ ಸಚಿವಾಲಯ ಸ್ಪಷ್ಟಪಡಿಸಿದೆ. ತಾನು ಹೊರಡಿಸಿರುವ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಆಡಳಿತಗಳು ಶಿಸ್ತುಬದ್ಧವಾಗಿ ಅನುಸರಿಸಬೇಕೆಂದು ಕೇಂದ್ರ ಸೂಚಿಸಿದೆ. 

ಕೇಂದ್ರದ ಮಾರ್ಗಸೂಚಿಗಳು ಈ ಕೆಳಗಿನಂತಿವೆ

* ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್‌ಗಳು ತಮ್ಮ ಆಸನ ಸಾಮರ್ಥ್ಯದ ಶೇ 50ರ ವರೆಗೆ ಮಾತ್ರ ಕಾರ್ಯನಿರ್ವಹಿಸಲು ಅನುಮತಿಸಲಾಗುವುದು. ಇದಕ್ಕಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು (ಎಸ್‌ಒಪಿ) ನೀಡಲಾಗುತ್ತದೆ.

* ಬಿಸಿನೆಸ್ ಟು ಬಿಸಿನೆಸ್ (ಬಿ-2-ಬಿ) ಪ್ರದರ್ಶನಗಳನ್ನು ತೆರೆಯಲು ಅನುಮತಿ ನೀಡಲಾಗುವುದು. ಇದಕ್ಕಾಗಿ ವಾಣಿಜ್ಯ ಇಲಾಖೆಯಿಂದ ಎಸ್‌ಒಪಿ ಅನ್ನು ನೀಡಲಾಗುತ್ತದೆ.

*ಕ್ರೀಡಾಪಟುಗಳ ತರಬೇತಿಗಾಗಿ ಬಳಸಲಾಗುವ ಈಜು ಕೊಳಗಳನ್ನು ತೆರೆಯಲು ಅನುಮತಿಸಲಾಗುವುದು. ಇದಕ್ಕಾಗಿ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ಎಸ್‌ಒಪಿ ನೀಡಲಿದೆ.

*ಮನರಂಜನಾ ಉದ್ಯಾನವನಗಳನ್ನು ತೆರೆಯಲು ಅನುಮತಿ ನೀಡಲಾಗುವುದು. ಇದಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ಎಸ್‌ಒಪಿ ನೀಡಲಾಗುತ್ತದೆ.

*ಆದ್ಯತೆಯ ಬೋಧನಾ ವಿಧಾನವಾಗಿ ಆನ್‌ಲೈನ್ ಮತ್ತು ದೂರಶಿಕ್ಷಣವು ಮುಂದುವರಿಯಲಿದ್ದು ಅದನ್ನು ಪ್ರೋತ್ಸಾಹಿಸಲಾಗುವುದು. 

*ಶಾಲೆಗಳು ಮತ್ತು ತರಬೇತಿ ಸಂಸ್ಥೆಗಳನ್ನು ಪುನಃ ತೆರೆಯಲು, ರಾಜ್ಯ ಸರ್ಕಾರಗಳಿಗೆ 2020 ಅಕ್ಟೋಬರ್ 15ರ ನಂತರ ಶ್ರೇಣೀಕೃತ ರೀತಿಯಲ್ಲಿ ನಿರ್ಧಾರ ತೆಗೆದುಕೊಳ್ಳುವ ಸ್ವಾತಂತ್ರ್ಯ ನೀಡಲಾಗಿದೆ.

*ದೈಹಿಕವಾಗಿ ಶಾಲೆಗೆ ಹಾಜರಾಗುವ ಬದಲು ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಬಯಸುವ ವಿದ್ಯಾರ್ಥಿಗಳಿಗೆ ಅನುಮತಿ ನೀಡಬಹುದು.

*ಪೋಷಕರ ಲಿಖಿತ ಒಪ್ಪಿಗೆಯೊಂದಿಗೆ ಮಾತ್ರ ವಿದ್ಯಾರ್ಥಿಗಳು ಶಾಲೆ ಅಥವಾ ಸಂಸ್ಥೆಗಳಿಗೆ ಹಾಜರಾಗಬಹುದು

*ವಿದ್ಯಾರ್ಥಿಗಳಿಗೆ ಹಾಜರಾತಿಯನ್ನು ಜಾರಿಗೊಳಿಸಬಾರದು. ಅದು ಸಂಪೂರ್ಣವಾಗಿ ಪೋಷಕರ ಒಪ್ಪಿಗೆಯನ್ನು ಅವಲಂಬಿಸಿರಬೇಕು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು