ಬುಧವಾರ, ಜೂನ್ 23, 2021
22 °C

ಕೋವಿಡ್‌-19: ದೇಶದ ಹತ್ತು ರಾಜ್ಯಗಳಿಂದ ಶೇ. 85ರಷ್ಟು ಪ್ರಕರಣಗಳು ವರದಿ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿ ಒಟ್ಟು ಪ್ರಕರಣಗಳಲ್ಲಿ ಶೇ. 85ರಷ್ಟು ಪ್ರಕರಣಗಳು ಮಹಾರಾಷ್ಟ್ರ, ಕರ್ನಾಟಕ ಮತ್ತು ಕೇರಳ ಸೇರಿದಂತೆ 10 ರಾಜ್ಯಗಳಿಂದ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಶನಿವಾರ ತಿಳಿಸಿದೆ.

ಹನ್ನೊಂದು ರಾಜ್ಯಗಳಲ್ಲಿ ಒಂದು ಲಕ್ಷಕ್ಕಿಂತ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಎಂಟು ರಾಜ್ಯಗಳಲ್ಲಿ 50 ಸಾವಿರಕ್ಕಿಂತ ಹೆಚ್ಚ ಸಕ್ರಿಯ ಪ್ರಕರಣಗಳಿವೆ.

ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 3,26,098 ಮಂದಿಯಲ್ಲಿ ಕೋವಿಡ್–19 ಸೋಂಕು ದೃಢಪಟ್ಟಿದೆ. 3,890 ಸೋಂಕಿತರು ಮೃತಪಟ್ಟಿದ್ದಾರೆ.

ಇದರೊಂದಿಗೆ ಈವರೆಗೆ ಸೋಂಕು ತಗುಲಿದವರ ಸಂಖ್ಯೆ 2,43 ಕೋಟಿ ದಾಟಿದೆ. ಸದ್ಯ ದೇಶದಲ್ಲಿ 36,73,802 ಸಕ್ರಿಯ ಪ್ರಕರಣಗಳಿವೆ. ಶನಿವಾರ ಒಂದೇ 3,53,299 ಜನರು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಭಾರತದ 24 ರಾಜ್ಯಗಳಲ್ಲಿ ಇದುವರೆಗೂ ಬೆಳಕಿಗೆ ಬಂದಿರುವ ಕೋವಿಡ್‌ ಪ್ರಕರಣಗಳ ಪ್ರಮಾಣ ಶೇ.15 ರಷ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು