Covid-19 India Update: ಗುಣಮುಖರಾಗುವವರ ಪ್ರಮಾಣ ಶೇ 95

ನವದೆಹಲಿ: ದೇಶದಲ್ಲಿ ಕೋವಿಡ್ನಿಂದ ಗುಣಮುಖರಾಗುವವರ ಪ್ರಮಾಣ ಶೇ 95 ರಷ್ಟು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.
ಗುಣಮುಖರಾಗುವ ಜಾಗತಿಕ ಪ್ರಮಾಣ ಶೇ 70.71 ಆದರೆ ಭಾರತದಲ್ಲಿ ಈ ಪ್ರಮಾಣ ಶೇ 95.31 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಹಾಗೇ ಕೋವಿಡ್ನಿಂದ ಮೃತಪಡುವವರ ಸಂಖ್ಯೆ ಕೂಡ ಗಣನೀಯವಾಗಿ ಕುಸಿದಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ದೆಹಲಿಯಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ ಈ ಮೂರು ರಾಜ್ಯಗಳಲ್ಲೂ ಸಾವಿನ ಪ್ರಮಾಣ ಹೆಚ್ಚಿದೆ. ಗುರುವಾರ ಒಂದೇ ದಿನ ಮಹಾರಾಷ್ಟ್ರದಲ್ಲಿ 97, ಪಶ್ಚಿಮ ಬಂಗಾಳದಲ್ಲಿ 46 ಹಾಗೂ ದೆಹಲಿಯಲ್ಲಿ 36 ಜನ ಮೃತಪಟ್ಟಿದ್ದಾರೆ.
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 24,010 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 355 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಬೆಳಕಿಗೆ ಬಂದಿರುವ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 99,56,558ಕ್ಕೆ ತಲುಪಿದ್ದು, ಈ ವರೆಗೆ 1,44,451 ಮಂದಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.
ಇದುವರೆಗೆ ದೇಶದಲ್ಲಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 94,89,740ಕ್ಕೆ ತಲುಪಿದ್ದು, ಒಟ್ಟು 3,22,366 ಪ್ರಕರಣಗಳು ಸಕ್ರಿಯವಾಗಿವೆ.
ಒಂದೇ ದಿನದಲ್ಲಿ 33,291 ಮಂದಿ ಕೋವಿಡ್ನಿಂದ ಗುಣಮಖರಾಗಿದ್ದಾರೆ.
📍#COVID19 India Tracker
(As on 17 December 2020, 08:00 AM)➡️Confirmed cases: 99,56,557
➡️Recovered: 94,89,740 (95.31%)👍
➡️Active cases: 3,22,366 (3.24%)
➡️Deaths: 1,44,451 (1.45%)#IndiaFightsCorona#Unite2FightCorona#StaySafe @MoHFW_INDIA pic.twitter.com/LBCMl5qrWC— #IndiaFightsCorona (@COVIDNewsByMIB) December 17, 2020
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.