ಬುಧವಾರ, ನವೆಂಬರ್ 25, 2020
22 °C

Covid-19 India Update: ಮುಂಬೈನಲ್ಲಿ ಮೇ ನಂತರ ಅತಿ ಕಡಿಮೆ 409 ಪ್ರಕರಣಗಳು

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ಕೋವಿಡ್‌–19 ದೃಢಪಟ್ಟ 2,535 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 3,001 ಮಂದಿ ಗುಣಮುಖರಾಗಿದ್ದಾರೆ ಹಾಗೂ 60 ಮಂದಿ ಸಾವಿಗೀಡಾಗಿದ್ದಾರೆ.

ಮೇ ಬಳಿಕ ಇದೇ ಮೊದಲ ಬಾರಿಗೆ ಮುಂಬೈನಲ್ಲಿ ಅತಿ ಕಡಿಮೆ 409 ಹೊಸ ಪ್ರಕರಣಗಳು ದಾಖಲಾಗಿವೆ. ಪಶ್ಚಿಮ ಬಂಗಾಳದಲ್ಲಿ 3,012 ಹೊಸ ಪ್ರಕರಣಗಳು ದಾಖಲಾಗಿದ್ದು, 53 ಮಂದಿ ಸಾವಿಗೀಡಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 7,714 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು ಕೊರೊನಾ ವೈರಸ್‌ ಸೋಂಕು ಪ್ರಕರಣಗಳ ಸಂಖ್ಯೆ 4,34,563 ತಲುಪಿದೆ.

ರಾಜಸ್ಥಾನದಲ್ಲಿ 2,169 ಕೊರೊನಾ ವೈರಸ್‌ ಪ್ರಕರಣಗಳು, ಹರಿಯಾಣದಲ್ಲಿ 2,153 ಪ್ರಕರಣಗಳು ಹಾಗೂ ತಮಿಳುನಾಡಿನಲ್ಲಿ  1,725 ಹೊಸ ಪ್ರಕರಣಗಳು ದಾಖಲಾಗಿವೆ.

ಸೋಮವಾರ ಬೆಳಗಿನವರೆಗೂ ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 30,548 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 435 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈ ವರೆಗೆ ಒಟ್ಟು 88,45,127 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,30,070 ಮಂದಿ ಸಾವಿಗೀಡಾಗಿದ್ದಾರೆ.

82,49,579 ಕೊರೊನಾ ಸೋಂಕಿತರು ಗುಣಮುಖರಾಗಿದ್ದು, ಕಳೆದ 24 ಗಂಟೆಗಳಲ್ಲಿ 13,738 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ.

ಆರೋಗ್ಯ ಸಚಿವಾಲಯದ ಇಂದಿನ ಮಾಹಿತಿ ಪ್ರಕಾರ, ದೇಶದಲ್ಲಿ ಒಟ್ಟು 4,65,478 ಸಕ್ರಿಯ ಪ್ರಕರಣಗಳಿವೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು