ಶನಿವಾರ, ಜನವರಿ 29, 2022
18 °C

Covid-19 India Update: ಕಳೆದ 24 ಗಂಟೆಗಳಲ್ಲಿ 8,895 ಕೋವಿಡ್ ಪ್ರಕರಣ ದೃಢ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 8,895 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 2,796 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಒಂದೇ ದಿನ 6,918 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದು, ಈ ವರೆಗೆ ಒಟ್ಟು 34,060,774 ಸೋಂಕಿತರು ಗುಣಮುಖರಾಗಿದ್ದಾರೆ.    

ಇಲ್ಲಿವರೆಗೆ ದೇಶದಾದ್ಯಂತ 3,46,33,255 ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, 4,73,326 ಮಂದಿ ಮೃತಪಟ್ಟಿದ್ದಾರೆ. ಒಟ್ಟು 99,155 ಸಕ್ರಿಯ ಪ್ರಕರಣಗಳಿವೆ.

ಕೇರಳ ಮತ್ತು ಬಿಹಾರ ಸರ್ಕಾರಗಳು ಕೆಲ ದಿನಗಳಿಂದ ಸಾವಿನ ಕುರಿತ ಸಂಖ್ಯೆಗಳನ್ನು ನೀಡಿರಲಿಲ್ಲ. ಇಂದು(ಭಾನುವಾರ) ಎಲ್ಲಾ ಸಾವಿನ ಸಂಖ್ಯೆಗಳನ್ನು ಒಟ್ಟಿಗೆ  ನೀಡಿದ್ದರಿಂದ, ಸಾವಿನ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು