ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: 8,306 ಹೊಸ ಪ್ರಕರಣ, 211 ಸಾವು

Last Updated 6 ಡಿಸೆಂಬರ್ 2021, 4:42 IST
ಅಕ್ಷರ ಗಾತ್ರ

ನವದೆಹಲಿ: 24 ಗಂಟೆಗಳಲ್ಲಿ ದೇಶದಾದ್ಯಂತ 8,306 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 211 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಒಂದೇ ದಿನ 8,834 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದು, ಈ ವರೆಗೆ ಒಟ್ಟು 34,069,608 ಸೋಂಕಿತರು ಗುಣಮುಖರಾಗಿದ್ದಾರೆ.

ಇಲ್ಲಿವರೆಗೆ ದೇಶದಾದ್ಯಂತ 3,46,41,561 ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, 4,73,537 ಮಂದಿ ಮೃತಪಟ್ಟಿದ್ದಾರೆ.ಒಟ್ಟು 98,416 ಸಕ್ರಿಯ ಪ್ರಕರಣಗಳಿವೆ.

ಕೊರೊನಾ ವೈರಾಣುವಿನ ಹೊಸ ರೂಪಾಂತರ ತಳಿ ಓಮೈಕ್ರಾನ್‌ನ 17 ಪ್ರಕರಣಗಳು ಭಾರತದಲ್ಲಿ ಭಾನುವಾರ ಒಂದೇ ದಿನ ಪತ್ತೆ ಆಗಿವೆ. ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಒಂಬತ್ತು, ಮಹಾರಾಷ್ಟ್ರದ ಪುಣೆಯಲ್ಲಿ ಏಳು, ದೆಹಲಿಯಲ್ಲಿ ಒಂದು ಪ‍್ರಕರಣಗಳು ದೃಢಪಟ್ಟಿವೆ. ದೇಶದಲ್ಲಿ ಈವರೆಗೆ ಓಮೈಕ್ರಾನ್‌ ತಳಿಯ 21 ಸೋಂಕು ಪ್ರಕರಣಗಳು ವರದಿ ಆಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT