ಶನಿವಾರ, ನವೆಂಬರ್ 28, 2020
25 °C

Covid-19 India Update: ಬಿಹಾರದಲ್ಲಿ ಶೇ 96.34ರಷ್ಟು ಸೋಂಕಿತರು ಗುಣಮುಖ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ ಕೋವಿಡ್‌–19 ದೃಢಪಟ್ಟ 7,002 ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 4,62,469 ತಲುಪಿದೆ. ಪ್ರಸ್ತುತ ಸುಮಾರು 80,000 ಜನರು ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಿಹಾರದಲ್ಲಿ 746 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 2,20,991 ಆಗಿದೆ. ಇಲ್ಲಿ ಗುಣಮುಖ ಪ್ರಮಾಣ ಶೇ 96.34ರಷ್ಟಿದ್ದು, ಈವರೆಗೂ ಸೋಂಕಿನಿಂದ 2,12,911 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ ಒಟ್ಟು 1,129 ಮಂದಿ ಸಾವಿಗೀಡಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಶುಕ್ರವಾರ 5,027 ಕೋವಿಡ್‌–19 ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 17,10,314 ಮುಟ್ಟಿದೆ. ಇದೇ ಅವಧಿಯಲ್ಲಿ 11,060 ಮಂದಿ ಗುಣಮುಖರಾಗಿದ್ದಾರೆ ಹಾಗೂ 161 ಮಂದಿ ಮೃತಪಟ್ಟಿದ್ದಾರೆ. ಒಟ್ಟು 1,02,099 ಸಕ್ರಿಯ ಪ್ರಕರಣಗಳಿವೆ.

ಪಶ್ಚಿಮ ಬಂಗಾಳದಲ್ಲಿ 3,942 ಪ್ರಕರಣಗಳು, ಹರಿಯಾಣದಲ್ಲಿ  2,267, ಉತ್ತರ ಪ್ರದೇಶದಲ್ಲಿ 2,187 ಪ್ರಕರಣಗಳು ದಾಖಲಾಗಿವೆ.

ಶುಕ್ರವಾರ ಬೆಳಗ್ಗಿನ ವರೆಗೂ ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 47, 638 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 670 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ ಒಟ್ಟು 84,11,724 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,24,985 ಮಂದಿ ಸಾವಿಗೀಡಾಗಿದ್ದಾರೆ.

77,65,966 ಸೋಂಕಿತರು ಗುಣಮುಖರಾಗಿದ್ದು, 5,20,773 ಸಕ್ರಿಯ ಪ್ರಕರಣಗಳಿವೆ.

ಕೋವಿಡ್‌ನಿಂದ ಚೇತರಿಸಿಕೊಂಡವರ ಪ್ರಮಾಣ ಶೇ.92.32ಕ್ಕೆ ತಲುಪಿದ್ದು, ಶೇ. 6.19 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದ ಮೃತಪಟ್ಟವರ ಪ್ರಮಾಣ ಶೇ. 1.49 ಇದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು