ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ: ಕಳೆದ 24 ಗಂಟೆಗಳಲ್ಲಿ 8,646 ಹೊಸ ಕೋವಿಡ್‌ ಪ್ರಕರಣ

Last Updated 1 ಏಪ್ರಿಲ್ 2021, 16:42 IST
ಅಕ್ಷರ ಗಾತ್ರ

ಮುಂಬೈ: ಕೋವಿಡ್‌ ಎರಡನೇ ಅಲೆಯು ಭಾರತದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಕಳೆದ24 ಗಂಟೆಗಳಲ್ಲಿ 8,000ಕ್ಕೂ ಅಧಿಕ ಪ್ರಕರಣಗಳು ಮುಂಬೈ ಮಹಾನಗರ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿವೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.

ಮುಂಬೈನಲ್ಲಿ ಗುರುವಾರ 8,646 ಹೊಸ ಪ್ರಕರಣಗಳು ದಾಖಲಾಗಿದ್ದು, 18 ಮಂದಿ ಕೋವಿಡ್‌ ಸೋಂಕಿನಿಂದ ಮೃತಪಟ್ಟಿದ್ದಾರೆ.

ಈ ವರೆಗೆ ಮುಂಬೈ ಮಹಾನಗರದಲ್ಲಿ 41,29,931 ಮಂದಿಗೆ ಕೋವಿಡ್‌ ಸೋಂಕು ತಗುಲಿದ್ದು, ಒಟ್ಟು 46,758 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ.

ಮಾರ್ಚ್ 25ರಿಂದ 31ರ ನಡುವಿನ ಕೋವಿಡ್ ಪ್ರಕರಣಗಳ ಒಟ್ಟಾರೆ ಬೆಳವಣಿಗೆಯ ದರವು ಶೇ. 1.38 ಆಗಿದೆ ಎಂದು ಮುಂಬೈ ಮಹಾನಗರ ಪಾಲಿಕೆ ಮಾಹಿತಿ ನೀಡಿದೆ.

ಮಹಾರಾಷ್ಟ್ರದಾದ್ಯಂತ 43,183 ಹೊಸ ಪ್ರಕರಣಗಳು ದಾಖಲಾಗಿದ್ದು, 249 ಮಂದಿ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT