ಕೋವಿಡ್ ಪರೀಕ್ಷೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ಅನೇಕ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್–19 ಪರೀಕ್ಷೆಗಳು ಇಳಿಮುಖವಾಗಿರುವ ಬಗ್ಗೆ ಗಮನ ಸೆಳೆದಿರುವ ಕೇಂದ್ರ ಸರ್ಕಾರ, ಪರೀಕ್ಷೆಗಳನ್ನು ಹೆಚ್ಚಿಸಬೇಕು ಎಂದು ಸೂಚಿಸಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಆರತಿ ಅಹುಜಾ ಅವರು ಈ ಸಂಬಂಧ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದಾರೆ.
‘ಕೋವಿಡ್ ಪಿಡುಗಿನ ನಿರ್ವಹಣೆಯಲ್ಲಿ ಪರೀಕ್ಷೆಗಳು ಮಹತ್ವದ ಪಾತ್ರ ವಹಿಸುತ್ತವೆ. ಹೊಸ ಕ್ಲಸ್ಟರ್ಗಳು/ಹಾಟ್ಸ್ಪಾಟ್ಗಳನ್ನು ಗುರುತಿಸಿ, ಸೋಂಕು ಪ್ರಸರಣಕ್ಕೆ ಕಡಿವಾಣ ಹಾಕುವ ಸಂಬಂಧ ಕಾರ್ಯತಂತ್ರ ರೂಪಿಸಲು ಅನುಕೂಲವಾಗುವುದು’ ಎಂದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.