ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಬಿಕ್ಕಟ್ಟು: ಚಾಲಕರಿಗೆ ಆರ್ಥಿಕ ನೆರವು, ಉಚಿತ ಪಡಿತರ -ಕೇಜ್ರಿವಾಲ್‌ ಘೋಷಣೆ

Last Updated 4 ಮೇ 2021, 8:00 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌ ಬಿಕ್ಕಟ್ಟಿನಿಂದ ಸಂಕಷ್ಟದಲ್ಲಿರುವ ದೆಹಲಿಯ 72 ಲಕ್ಷ ಪಡಿತರ ಚೀಟಿದಾರರಿಗೆ ಎರಡು ತಿಂಗಳ ಕಾಲ ಉಚಿತವಾಗಿ ಪಡಿತರ ಹಾಗೂ ಆಟೊ–ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ₹5 ಸಾವಿರ ಅರ್ಥಿಕ ನೆರವು ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಮಂಗಳವಾರ ಪ್ರಕಟಿಸಿದ್ದಾರೆ.

ಕೋವಿಡ್‌ ಸೋಂಕು ಪ್ರಸರಣ ತಡೆಗೆ ದೆಹಲಿಯಲ್ಲಿ ಎರಡು ತಿಂಗಳವರೆಗೆ ಲಾಕ್‌ಡೌನ್ ಜಾರಿಗೊಳಿಸುವುದಿಲ್ಲ. ಈಗ ದೆಹಲಿಯ ಪರಿಸ್ಥಿತಿ ಸುಧಾರಿಸುವ ವಿಶ್ವಾಸವಿದೆ. ಲಾಕ್‌ಡೌನ್ ಜಾರಿಗೊಳಿಸುವ ಅಗತ್ಯವೂ ಬರುವುದಿಲ್ಲ‘ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಕಳೆದ ವರ್ಷದ ಲಾಕ್‌ಡೌನ್ ಸಮಯದಲ್ಲಿ ದೆಹಲಿ ಸರ್ಕಾರ 1.56 ಲಕ್ಷ ಆಟೊ ಮತ್ತು ಟ್ಯಾಕ್ಸಿ ಚಾಲಕರಿಗೆ ತಲಾ ₹5ಸಾವಿರ ಆರ್ಥಿಕ ನೆರವು ನೀಡಿತ್ತು. ಈ ವರ್ಷವೂ ಅದೇ ರೀತಿ ಅವರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ‘ ಎಂದು ಕೇಜ್ರಿವಾಲ್ ಹೇಳಿದರು.

ಕೇಂದ್ರಗಳನ್ನು ತೆರೆಯಲು ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT