ಗುರುವಾರ , ಅಕ್ಟೋಬರ್ 28, 2021
18 °C

ಭಾರತಕ್ಕೆ ಬರಲು ವಿದೇಶಿ ಪ್ರವಾಸಿಗರಿಗೆ ಶೀಘ್ರವೇ ಮುಕ್ತ ಅವಕಾಶ: ಕೇಂದ್ರ ಸರ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಇಳಿಮುಖವಾಗಿರುವ ಕಾರಣ ಭಾರತ ಪ್ರವೇಶಕ್ಕೆ ವಿದೇಶಿ ಪ್ರವಾಸಿಗರಿಗೆ ಸದ್ಯದಲ್ಲೇ ಅನುಮತಿ ದೊರಕಲಿದೆ.

ಮುಂದಿನ 10 ದಿನಗಳಲ್ಲಿ ಅಧಿಕೃತ ಘೋಷಣೆ ಹೊರಬೀಳಲಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.

ಪ್ರವಾಸೋದ್ಯಮ, ನಾಗರಿಕ ವಿಮಾನಯಾನ ವಲಯವನ್ನು ಪುನಶ್ಚೇತನಗೊಳಿಸುವ ಯತ್ನವಾಗಿ ಮೊದಲ ಐದು ಲಕ್ಷ ವಿದೇಶಿ ಪ್ರವಾಸಿಗರಿಗೆ ವೀಸಾವನ್ನು ಉಚಿತವಾಗಿ ನೀಡಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೋವಿಡ್‌ ಸಾಂಕ್ರಾಮಿಕದ ಕಾರಣ 2020ರ ಮಾರ್ಚ್‌ನಲ್ಲಿ ದೇಶದಾದ್ಯಂತ ಲಾಕ್‌ಡೌನ್ ಘೋಷಣೆಯಾದ ಬಳಿಕ ಪ್ರವಾಸೋದ್ಯಮ, ನಾಗರಿಕ ವಿಮಾನಯಾನ ವಲಯ ಭಾರಿ ನಷ್ಟ ಕಂಡಿದೆ.

ಐದು ಲಕ್ಷದವರೆಗೆ ವೀಸಾ ಅಥವಾ 2022ರ ಮಾರ್ಚ್‌ 31ರವರೆಗೆ ಪ್ರವಾಸಿಗರಿಗೆ ಉಚಿತ ವೀಸಾ (ಯಾವುದು ಮೊದಲು ಅದು) ನೀಡಲಾಗುವುದು.

ಲಸಿಕೆ ಹಾಕಿಸಿಕೊಂಡ ಪ್ರವಾಸಿಗರಿಗೆ ಮಾತ್ರ ಪ್ರವೇಶವನ್ನು ಸೀಮಿತಗೊಳಿಸಬೇಕೇ ಎಂಬಂತಹ ಕೆಲ ನಿಯಮಗಳ ಬಗ್ಗೆ ಇನ್ನೂ ಚಿಂತನೆ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಯುರೋಪ್‌ ಸೇರಿದಂತೆ ಹಲವು ರಾಷ್ಟ್ರಗಳು ಈಗಾಗಲೇ ಪ್ರವಾಸೋದ್ಯಮಕ್ಕೆ ಮುಕ್ತ ಅವಕಾಶ ನೀಡಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು