ಬುಧವಾರ, ಮೇ 12, 2021
18 °C

ಮಹಾರಾಷ್ಟ್ರದಲ್ಲಿ ಕೋವಿಡ್ ಹೆಚ್ಚಳ: 2 ವಾರ ಸಂಪೂರ್ಣ ಲಾಕ್‌ಡೌನ್‌ ಸಾಧ್ಯತೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ನಿತ್ಯ 50 ಸಾವಿರ ದಾಟುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಲಾಕ್‌ಡೌನ್‌ ಕುರಿತಂತೆ ಭಾನುವಾರ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆಗಳಿವೆ.

ಶನಿವಾರ ಸರ್ವಪಕ್ಷಗಳ ಸಭೆ ನಡೆಸಿರುವ ಅವರು ರಾಜ್ಯದಲ್ಲಿ ಎರಡು ವಾರ ಸಂಪೂರ್ಣ ಲಾಕ್‌ಡೌನ್‌ ಮಾಡುವ ಸಂಬಂಧ ಚರ್ಚೆ ಮಾಡಿದ್ದಾರೆ. ಬಿಜೆಪಿ ಹೊರತುಪಡಿಸಿ ಎಲ್ಲ ಪಕ್ಷಗಳು ಲಾಕ್‌ಡೌನ್‌ ಮಾಡಲು ಸಮ್ಮತಿ ಸೂಚಿಸಿವೆ ಎನ್ನಲಾಗಿದೆ.

ಲಾಕ್‌ಡೌನ್‌ ಮಾಡುವ ಸಂಬಂಧ ಈಗಾಗಲೇ ವಿವಿಧ ವಲಯಗಳ ಮುಖಂಡರು, ವೈದ್ಯರ ಜೊತೆ ಚರ್ಚೆ ನಡೆಸಲಾಗಿದ್ದು ಅವರೂ ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎಂದು ಉದ್ದವ್‌ ಠಾಕ್ರೆ ಸರ್ವಪಕ್ಷಗಳ ಸಭೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಓದಿ: 

ಹೆಚ್ಚುತ್ತಿರುವ ಸೋಂಕನ್ನು ತಡೆಯಲು ಲಾಕ್‌ಡೌನ್‌ ಮಾಡುವುದು ಅನಿರ್ವಾಯವಾಗಿದೆ. ಇಲ್ಲವಾದಲ್ಲಿ ಸೋಂಕಿನ ಸರಪಳಿಯನ್ನು ತುಂಡರಿಸಲು ಸಾಧ್ಯವಿಲ್ಲ ಎಂದು ಉದ್ದವ್‌ ಠಾಕ್ರೆ ಸಭೆಯಲ್ಲಿ ತಿಳಿಸಿದ್ದಾರೆ.

ಮಹಾರಾಷ್ಟ್ರದ ಸಿಎಂ ಕಚೇರಿ ಮೂಲಗಳ ಪ್ರಕಾರ ರಾಜ್ಯದಲ್ಲಿ ಎರಡು ವಾರ ಸಂಪೂರ್ಣ ಲಾಕ್‌ಡೌನ್‌ ಮಾಡುವ ಸಾಧ್ಯತೆಗಳು ಹೆಚ್ಚಿವೆ ಎನ್ನಲಾಗಿದೆ. ಭಾನುವಾರ ರಾತ್ರಿಯ ವೇಳೆಗೆ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು