ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

India Covid Update: ಹೊಸದಾಗಿ 17,336 ಪ್ರಕರಣ ದೃಢ, ಶೇ 30ರಷ್ಟು ಹೆಚ್ಚಳ

ಅಕ್ಷರ ಗಾತ್ರ

ನವದೆಹಲಿ:ದೇಶದಾದ್ಯಂತ ಶುಕ್ರವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ಹೊಸದಾಗಿ 17,336 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಈ ಪ್ರಮಾಣ ಗುರುವಾರಕ್ಕೆ ಹೋಲಿಸಿದರೆ ಶೇ 30ರಷ್ಟು ಜಾಸ್ತಿಯಾಗಿದೆ. ಗುರುವಾರದಂದು 13,313 ಕೊರೊನಾ ಸೋಂಕು ಪ್ರಕರಣ ವರದಿಯಾಗಿದ್ದವು.

ಈ ಅವಧಿಯಲ್ಲಿ 13,059 ಮಂದಿ ಚೇತರಿಸಿಕೊಂಡಿದ್ದು, 13 ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 88,284ಕ್ಕೆ ತಲುಪಿದೆ. ಈ ಮೂಲಕ ಸಕ್ರಿಯ ಪ್ರಕರಣಗಳಲ್ಲೂ (4,294) ಹೆಚ್ಚಳ ಕಂಡುಬಂದಿದೆ.

ದೇಶದಲ್ಲಿ ಈವರೆಗೆ 4,33,62,294 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,24,954 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT