ಭಾನುವಾರ, ನವೆಂಬರ್ 29, 2020
19 °C

Covid-19 India Update: 4.46 ಲಕ್ಷ ಸಕ್ರಿಯ ಪ್ರಕರಣ, 83.83 ಲಕ್ಷ ಜನ ಗುಣಮುಖ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 45,576 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 585 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಈ ವರೆಗೆ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 89,58,484 ತಲುಪಿದ್ದು, ಈ ಪೈಕಿ 1,31,578 ಮಂದಿ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ 48,493 ಮಂದಿ ಗುಣಮುಖರಾಗಿದ್ದು, ಒಟ್ಟು 83,83,603 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಐಸಿಎಂಆರ್‌ ಪ್ರಕಾರ, ದೇಶದಾದ್ಯಂತ 12,85,08,389 ಗಂಟಲು ದ್ರವ ಮಾದರಿಗಳಿಗೆ ಕೋವಿಡ್‌–19 ಪರೀಕ್ಷೆ ನಡೆಸಲಾಗಿದೆ. ಮಂಗಳವಾರ ಒಂದೇ ದಿನ 10,28,203 ಪರೀಕ್ಷೆಗಳನ್ನು ಮಾಡಲಾಗಿದೆ.

ಪ್ರಸ್ತುತ ಭಾರತದಲ್ಲಿ 4,46,805 ಸಕ್ರಿಯ ಪ್ರಕರಣಗಳಿವೆ.

ಅತಿಹೆಚ್ಚು ಕೋವಿಡ್ ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ಒಟ್ಟಾರೆ 17,57,520 ಜನರಿಗೆ ಸೋಂಕು ತಗುಲಿದೆ. ಮುಂಬೈವೊಂದರಲ್ಲೇ ಕಳೆದ 24 ಗಂಟೆಗಳಲ್ಲಿ 924 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 1,192 ಜನರು ಗುಣಮುಖರಾಗಿದ್ದಾರೆ ಮತ್ತು 12 ಜನರು ಸಾವಿಗೀಡಾಗಿದ್ದಾರೆ. ಈ ಮೂಲಕ 8,474 ಸಕ್ರಿಯ ಪ್ರಕರಣಗಳೊಂದಿಗೆ ಸೋಂಕಿತರ ಸಂಖ್ಯೆ 2,72,449ಕ್ಕೆ ಏರಿಕೆಯಾಗಿದೆ.

ಹರಿಯಾಣದಲ್ಲಿ 2,212 ಜನರಿಗೆ ಸೋಂಕು ತಗುಲಿದ್ದು, 2,156 ಜನರು ಗುಣಮುಖರಾಗಿದ್ದಾರೆ ಮತ್ತು 20 ಜನರು ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ಮೂಲಕ ಸೋಂಕಿತರ ಸಂಖ್ಯೆಯು 2,09,251ಕ್ಕೆ ಏರಿಕೆಯಾಗಿದೆ. ಒಟ್ಟಾರೆ 1,87,559 ಜನರು ಗುಣಮುಖರಾಗಿದ್ದಾರೆ.

ಮಧ್ಯಪ್ರದೇಶದಲ್ಲಿ 1,363 ಹೊಸ ಪ್ರಕರಣಗಳೊಂದಿಗೆ ಸೋಂಕಿತರ ಸಂಖ್ಯೆ 1,88,018ಕ್ಕೆ ಏರಿಕೆಯಾಗಿದೆ. 9,800 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 1,75,089 ಜನರು ಗುಣಮುಖರಾಗಿದ್ದಾರೆ. 3,129 ಜನರು ಮೃತಪಟ್ಟಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು