ಶುಕ್ರವಾರ, ಸೆಪ್ಟೆಂಬರ್ 25, 2020
22 °C
ಕೋವಿಡ್‌: ಸೋಂಕಿತರ ಸಂಖ್ಯೆ 2.19 ಲಕ್ಷಕ್ಕೆ ಏರಿಕೆ

Covid India Update: 48 ಗಂಟೆಗಳಲ್ಲಿ 16 ಸಾವಿರ ಪ್ರಕರಣ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ 8,818 ಮಂದಿ ಕೋವಿಡ್ ಪೀಡಿತರಾಗಿರುವುದು ಶನಿವಾರ ದೃಢಪಟ್ಟಿದೆ. ಇದೇ ಮೊದಲ ಬಾರಿಗೆ ಪ್ರಕರಣಗಳ ಸಂಖ್ಯೆ 24 ಗಂಟೆಗಳ ಅವಧಿಯಲ್ಲಿ 8 ಸಾವಿರದ ಗಡಿ ದಾಟಿದ್ದು, ಸೋಂಕಿತರ ಸಂಖ್ಯೆ 2.19 ಲಕ್ಷಕ್ಕೆ ಏರಿಕೆಯಾಗಿದೆ. 

48 ಗಂಟೆಗಳಲ್ಲಿ 16,726 ಮಂದಿ ಸೋಂಕಿತರಾಗಿರುವುದು ಖಚಿತಪಟ್ಟಿದೆ. ಸೋಂಕಿತರಲ್ಲಿ ಮತ್ತೆ 114 ಮಂದಿ ಮೃತಪಟ್ಟಿದ್ದು, ಸಾವಿಗೀಡಾದವರ ಸಂಖ್ಯೆ 3,831ಕ್ಕೆ ಏರಿಕೆಯಾಗಿದೆ. 15 ದಿನಗಳಲ್ಲಿ ಪ್ರತಿನಿತ್ಯ ಸರಾಸರಿ 101 ಮಂದಿ ಮರಣ ಹೊಂದಿರುವುದು ದೃಢಪಟ್ಟಿದೆ. 

ಚೇತರಿ ಸಿಕೊಳ್ಳುವವರ ಸಂಖ್ಯೆಯಲ್ಲಿಯೂ ಏರಿಕೆ ಕಾಣುತ್ತಿದ್ದು, ಬೆಂಗಳೂರಿನಲ್ಲಿ 2,034 ಮಂದಿ ಸೇರಿದಂತೆ ರಾಜ್ಯದಲ್ಲಿ 6,629 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ರಾಜ್ಯದಲ್ಲಿ ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 1.34 ಲಕ್ಷ ದಾಟಿದೆ. 81 ಸಾವಿರಕ್ಕೂ ಅಧಿಕ ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. 

ಒಂದೇ ದಿನ 54,806 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ: ಬೆಂಗಳೂರಿನಲ್ಲಿ ಹೊಸದಾಗಿ 3,495 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 87 ಸಾವಿರ ದಾಟಿದೆ. ಬಳ್ಳಾರಿ (759), ಮೈಸೂರು (635), ಬೆಳಗಾವಿ (358), ದಾವಣಗೆರೆ (327), ದಕ್ಷಿಣ ಕನ್ನಡ (271), ಉಡುಪಿ (241), ಧಾರವಾಡ (239), ವಿಜಯಪುರ (232) ಜಿಲ್ಲೆಯಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ಶನಿವಾರ ದೃಢಪಟ್ಟ ಮರಣ ಪ್ರಕರಣಗಳಲ್ಲಿ 28 ಮಂದಿ 50 ವರ್ಷದೊಳಗಿನವರಾಗಿದ್ದಾರೆ.

ಇದರಲ್ಲಿ ರಾಯಚೂರಿನ 25 ವರ್ಷದ ಯುವತಿ ಹಾಗೂ ಬೆಂಗಳೂರಿನ 28 ವರ್ಷದ ಯುವಕ ಕೂಡ ಸೇರಿದ್ದಾರೆ. ಬೆಂಗಳೂರು (35), ಮೈಸೂರು (10), ಧಾರವಾಡ (7) ಜಿಲ್ಲೆಯಲ್ಲಿ ಅಧಿಕ ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ ಕೋವಿಡ್‌–19 ಸೋಂಕಿಗೆ ತುತ್ತಾಗಿ ಗುಣಮುಖರಾದವರ ಪ್ರಮಾಣ ಶೇ 71.61 ರಷ್ಟಿದ್ದು, ಸಾವಿನ ಪ್ರಮಾಣ ಶೇ 1.94ಕ್ಕೆಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು