ಮಂಗಳವಾರ, ಏಪ್ರಿಲ್ 20, 2021
32 °C

Covid-19 India Update| 24 ಗಂಟೆಯಲ್ಲಿ 18,711 ಪ್ರಕರಣಗಳು ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 18,711 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ದೇಶದ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 1,12,10,799ಕ್ಕೆ ಏರಿಕೆಯಾಗಿದೆ.

ಈ ಒಂದು ದಿನದ ಅವಧಿಯಲ್ಲಿ 100 ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 1,57,756ಕ್ಕೆ ಏರಿದೆ. 14,392 ಮಂದಿ 24 ಗಂಟೆಗಳ ಅವಧಿಯಲ್ಲಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 1,08,68,520 ಮಂದಿ ಈ ವರೆಗೆ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ.

ಸದ್ಯ ದೇಶದಲ್ಲಿ ಈಗ 1,84,523 ಪ್ರಕರಣಗಳಷ್ಟೇ ಸಕ್ರಿಯವಾಗಿವೆ.

ಕೋವಿಡ್‌ ವಿರುದ್ಧದ ಅಭಿಯಾನದಲ್ಲಿ ಭಾರತವು ಈ ವರೆಗೆ 2,09,22,344 ಮಂದಿಗೆ ಲಸಿಕೆ ಹಾಕಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು