Covid India Updates: ಹೊಸದಾಗಿ 2,112 ಪ್ರಕರಣ ದಾಖಲು, 4 ಮಂದಿ ಸಾವು

ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ ಕೋವಿಡ್ ದೃಢಪಟ್ಟ 2,112 ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಹೀಗಾಗಿ, ಕೋವಿಡ್ ದೃಢಪಟ್ಟವರ ಒಟ್ಟು ಸಂಖ್ಯೆ 4,46,40,748ಕ್ಕೆ ಏರಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 24,043ಕ್ಕೆ ಇಳಿದಿದೆ.
24 ಗಂಟೆಗಳಲ್ಲಿ ಕೇರಳದಲ್ಲಿ ಮೂವರು ಮತ್ತು ಪಶ್ಚಿಮ ಬಂಗಾಳದಲ್ಲಿ ಒಬ್ಬ ಸೋಂಕಿತ ಸಾವಿಗೀಡಾಗಿದ್ದಾನೆ. ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,28,957ರಷ್ಟಾಗಿದೆ.
ಒಟ್ಟು ಸೋಂಕಿತರ ಪೈಕಿ ಶೇಕಡ 0.05ರಷ್ಟು ಸಕ್ರಿಯ ಪ್ರಕರಣಗಳಿವೆ. ಕೋವಿಡ್ ಚೇತರಿಕೆ ದರ ಶೇಕಡ 98.76ರಷ್ಟಿದೆ.
ಶುಕ್ರವಾರ ಸಕ್ರಿಯ ಪ್ರಕರಣಗಳ ಸಂಖ್ಯೆ 25,037 ರಷ್ಟಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.