ಶುಕ್ರವಾರ, ಜೂನ್ 18, 2021
24 °C
ಸ್ವಯಂಪ್ರೇರಿತ ಕೋವಿಡ್‌ ನಿರ್ವಹಣೆ ಪ್ರಕರಣದ ವಿಚಾರಣೆ

ಸುಪ್ರೀಂ ಕೋರ್ಟ್‌ನಲ್ಲೂ ತಾಂತ್ರಿಕ ಅಡಚಣೆ: ವಿಚಾರಣೆ 13ಕ್ಕೆ ಮುಂದೂಡಿಕೆ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ವರ್ಚುವಲ್‌ ವಿಚಾರಣೆ‘ಯಲ್ಲಿ ತಾಂತ್ರಿಕ ಅಡಚಣೆ ಎದುರಾಗಿರುವುದರಿಂದ ‘ಕೋವಿಡ್‌ 19 ನಿರ್ವಹಣೆ‘ ಕುರಿತು ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಪ್ರಕರಣದ ವಿಚಾರಣೆಯನ್ನು ಮೇ 13ಕ್ಕೆ ಮುಂದೂಡಿರುವುದಾಗಿ ಸುಪ್ರೀಂ ಕೋರ್ಟ್‌ ತಿಳಿಸಿದೆ.

ಕೋವಿಡ್‌ ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಭಾನುವಾರ ರಾತ್ರಿ ಅಫಿಡವಿಟ್‌ ಸಲ್ಲಿಸಿದೆ. ಅದನ್ನು ಪರಿಶೀಲಿಸಿ, ವಿಚಾರಣೆ ನಡೆಸುವುದಕ್ಕೆ ಸಮಯ ಹಿಡಿಯುತ್ತದೆ. ಈಗ ವರ್ಚುವಲ್ ವಿಚಾರಣೆಯಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡಿರುವ ಕಾರಣ, ಈ ವಿಚಾರಣೆಯನ್ನು ಮುಂದೂಡಿದ್ದೇವೆ ಎಂದು ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್‌, ಎಲ್‌.ಎನ್‌.ರಾವ್ ಮತ್ತು ಎಸ್‌. ರವೀಂದ್ರ ಭಟ್ ಅವರನ್ನೊಳಗೊಂಡ ನ್ಯಾಯಪೀಠ ತಿಳಿಸಿದೆ.

‘ನಮ್ಮ ಸರ್ವರ್ ಇಂದು ಡೌನ್ ಆಗಿದೆ. ಈ ಕುರಿತು ನ್ಯಾಯಮೂರ್ತಿಗಳು ಚರ್ಚೆ ನಡೆಸಿದ್ದೇವೆ. ಗುರುವಾರ ಈ ವಿಷಯವನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ‘ ಎಂದು ನ್ಯಾಯಪೀಠ ಹೇಳಿದೆ.

ನ್ಯಾಯಮೂರ್ತಿಗಳು ಕೇಂದ್ರ ಸಲ್ಲಿಸಿದ್ದ ಅಫಿಡವಿಟ್ ಅನ್ನು ಪರಿಶೀಲಿಸುತ್ತಾರೆ. ಈ ಪ್ರಮಾಣ ಪತ್ರದ ಬಗ್ಗೆ ಅಮಿಕಸ್ ಕ್ಯೂರಿಯವರ ಪ್ರತಿಕ್ರಿಯೆ ಅಗತ್ಯವಿದೆ. ಅವರು ಕೂಡ ಇದನ್ನು ಪರಿಶೀಲಿಸಬೇಕು‘ ಎಂದು ನ್ಯಾಯಮೂರ್ತಿ ಭಟ್ ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು