ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಕುರಿತು ಮುಂಜಾಗ್ರತೆ ಅಗತ್ಯ: ಆರೋಗ್ಯ ಸಚಿವ

Last Updated 13 ಜೂನ್ 2022, 13:37 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಹಲವು ರಾಜ್ಯಗಳಲ್ಲಿ ಕೋವಿಡ್ 19 ಪ್ರಕರಣ ಹೆಚ್ಚುತ್ತಿರುವುದರಿಂದ ಮುಂಜಾಗ್ರತೆ ಅಗತ್ಯ. ಸಾಂಕ್ರಾಮಿಕ ರೋಗ ಸಂಪೂರ್ಣ ನಿರ್ಮೂಲನೆ ಆಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವಿಯಾ ಎಚ್ಚರಿಸಿದರು.

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಅವರು,ಕೆಲವು ಜಿಲ್ಲೆಗಳು ಮತ್ತು ರಾಜ್ಯಗಳಲ್ಲಿ ಪಾಸಿಟಿವಿಟಿ ದರ ಹೆಚ್ಚಿದೆ. ಸಮಯೋಚಿತ ಪರೀಕ್ಷೆಯು ಸಮುದಾಯದಲ್ಲಿ ಸೋಂಕು ಹರಡುವಿಕೆ ತಡೆಯಲು ಸಹಾಯ ಮಾಡುತ್ತದೆ.ಕೋವಿಡ್‌ ಪರೀಕ್ಷೆ, ಚಿಕಿತ್ಸೆ, ಲಸಿಕೆ ಸೇರಿದಂತೆ ಐದು ಅಂಶಗಳನ್ನು ಪಾಲಿಸಬೇಕು ಎಂದು ಮಾಂಡವಿಯಾ ಹೇಳಿದರು.

ದೇಶದಲ್ಲಿ ಹೊಸ ರೂಪಾಂತರ ಗುರುತಿಸಲು ವೈರಾಣುವಿನ ವಂಶವಾಹಿ ಸಂರಚನಾ ವಿಶ್ಲೇಷಣೆ ಕೇಂದ್ರೀಕರಿಸುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದ ಸಚಿವರು,60 ವರ್ಷ ಮೇಲ್ಪಟ್ಟವರಿಗೆ ಕೋವಿಡ್‌ ಲಸಿಕೆ ನೀಡಬೇಕು. ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸುತ್ತಿದ್ದಾರೆ. ದೇಶದಾದ್ಯಂತ ಸಾಕಷ್ಟು ಲಸಿಕೆ ಲಭ್ಯವಿದೆ. ಲಸಿಕೆಗಳು ವ್ಯರ್ಥವಾಗದಂತೆ ನೋಡಿಕೊಳ್ಳುವಂತೆ ರಾಜ್ಯಗಳಿಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT