ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ಸಂಚಾರ: ಕೋವಿಡ್‌ ನಿಯಮಾವಳಿ ಸಡಿಲಿಕೆ

Last Updated 22 ಮಾರ್ಚ್ 2022, 20:18 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌ ನಿಯಮಾವಳಿಗಳನ್ನು ನಾಗರಿಕ ವಿಮಾನಯಾನ ಸಚಿವಾಲಯವು ಸಡಿಲಿಸಿದ್ದು, ವಿಮಾನಗಳ ಕ್ಯಾಬಿನ್ ಸಿಬ್ಬಂದಿ ಪಿಪಿಇ ಕಿಟ್ ಧರಿಸುವ ಅಗತ್ಯವಿಲ್ಲ. ವೈದ್ಯಕೀಯ ತುರ್ತು ಪರಿಸ್ಥಿತಿಗಾಗಿ ಅಂತರಾಷ್ಟ್ರೀಯ ವಿಮಾನಗಳಲ್ಲಿ ವಿಮಾನಯಾನ ಸಂಸ್ಥೆಗಳು ಮೂರು ಆಸನಗಳನ್ನು ಖಾಲಿ ಇಡಬೇಕಾಗಿಲ್ಲ ಎಂದು ತಿಳಿಸಿದೆ.

ವಿಮಾನಗಳ ಸಂಚಾರ ಕಾರ್ಯಾಚರಣೆಯನ್ನು ಸುಗಮವಾಗಿ ನಡೆಸಲು ಅನುಕೂಲವಾಗುವಂತೆ ಈ ಸಡಿಲಿಕೆಯನ್ನು ಮಾಡಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಮಾರ್ಚ್ 21 ರಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ. ವಿಮಾನ ನಿಲ್ದಾಣಗಳಲ್ಲಿನ ಭದ್ರತಾ ಸಿಬ್ಬಂದಿ ಪ್ರಯಾಣಿಕರ ತಪಾಸಣೆಯನ್ನು ಪುನರಾರಂಭಿಸಬಹುದು ಎಂದು ಹೇಳಿದೆ.

ಜನವರಿ ನಂತರ ಭಾರತದಲ್ಲಿ ವಿಮಾನಯಾನ ಮಾರುಕಟ್ಟೆಯಲ್ಲಿ ಚೇತರಿಕೆ ಕಂಡುಬಂದಿದೆ. ಫೆಬ್ರುವರಿಯಲ್ಲಿ ದೇಶದಲ್ಲಿ ಸುಮಾರು 76.96 ಲಕ್ಷ ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಜನವರಿಗಿಂತ ಶೇ 20 ರಷ್ಟು ಹೆಚ್ಚು ಮಂದಿ ಪ್ರಯಾಣಿಸಿದ್ದಾರೆ.

ಪ್ರಯಾಣಿಕರಿಗೆ ಹಾಗೂ ಸಿಬ್ಬಂದಿಗೆ ಉಸಿರಾಟದ ಸಮಸ್ಯೆ ಉಂಟಾದಾಗ ಬಳಸಲು ವಿಮಾನಯಾನ ಸಂಸ್ಥೆಗಳು ಕೆಲವು ಹೆಚ್ಚುವರಿ ಪಿಪಿಇ ಕಿಟ್‌ಗಳು, ಸ್ಯಾನಿಟೈಸರ್ ಮತ್ತು N-95 ಮುಖಗವಸುಗಳನ್ನು ಹೊಂದಿರಬೇಕು ಎಂದು ಸಚಿವಾಲಯ ತಿಳಿಸಿದೆ.

2021ರ ಅಕ್ಟೋಬರ್‌ 18 ರಿಂದಲೇ ದೇಶದಲ್ಲಿ ವಿಮಾನ ಸಂಚಾರ ಆರಂಭಗೊಂಡಿದೆ. 2022ರ ಮಾರ್ಚ್‌ 27 ರಿಂದ ಅಂತರರಾಷ್ಟ್ರೀಯ ವಿಮಾನ ಸಂಚಾರ ಪುನರ್‌ ಆರಂಭವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT