ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ | ಕೋವಿಡ್ ಹೆಚ್ಚಳ; ಕಾಂಗ್ರೆಸ್ ಮ್ಯಾರಥಾನ್, ರ‍್ಯಾಲಿ ಮುಂದೂಡಿಕೆ

Last Updated 5 ಜನವರಿ 2022, 9:17 IST
ಅಕ್ಷರ ಗಾತ್ರ

ಲಖನೌ: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆಯ ಹೊಸ್ತಿಲಲ್ಲಿರುವ ಉತ್ತರ ಪ್ರದೇಶದಲ್ಲಿ ಮ್ಯಾರಥಾನ್ ಸೇರಿದಂತೆ ತನ್ನ ಎಲ್ಲ ಸಾರ್ವಜನಿಕ ಸಮಾವೇಶಗಳನ್ನು ಕಾಂಗ್ರೆಸ್ ಮುಂದೂಡಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೋಯ್ಡಾ ರ‍್ಯಾಲಿಯನ್ನು ರದ್ದುಗೊಳಿಸಿದ್ದಾರೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜಕೀಯ ಸಮಾವೇಶಗಳು ಕಾವೇರಿತ್ತು. ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು.

ಸಾರ್ವಜನಿಕ ಆರೋಗ್ಯ ಹಾಗೂ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಮುಖಂಡರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚುನಾವಣೆ ಹೊಸ್ತಿಲಲ್ಲಿರುವ ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲೂ ಪ್ರದೇಶ ಕಾಂಗ್ರೆಸ್ ಸಮಿತಿಗಳು (ಪಿಸಿಸಿ) ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿವೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.

ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಸಮಾವೇಶಗಳನ್ನು ಮುಂದೂಡುವುದಕ್ಕೆ ಸಂಬಂಧಿಸಿದಂತೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಎಐಸಿಸಿ, ಪ್ರಾದೇಶಿಕ ವಿಭಾಗಗಳಿಗೆ ಸೂಚಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT