ನವದೆಹಲಿ (ಪಿಟಿಐ): ದೇಶದಲ್ಲಿ ಒಂದೇ ದಿನ ಹೊಸದಾಗಿ 2,151 ಮಂದಿಗೆ ಕೋವಿಡ್ ದೃಢಪಟ್ಟಿದೆ. ಕಳೆದ ಐದು ತಿಂಗಳಲ್ಲಿ ದಾಖಲಾದ ದಿನವೊಂದರ ಅತ್ಯಧಿಕ ಪ್ರಕರಣ ಇದಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 11,903ಕ್ಕೆ ಏರಿಕೆ ಆಗಿದೆ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶ ತಿಳಿಸಿದೆ.
ಈಚೆಗೆ ಏಳು ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಮಹಾರಾಷ್ಟ್ರ, ಕೇರಳದಲ್ಲಿ ತಲಾ ಮೂವರು ಮತ್ತು ಕರ್ನಾಟಕದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಬುಧವಾರ ಬೆಳಿಗ್ಗೆ 8 ಗಂಟೆವರೆಗೆ ದಾಖಲಾದ ಅಂಕಿಅಂಶದ ಪ್ರಕಾರ ದಿನವೊಂದರ ಕೋವಿಡ್ ದೃಢ ಪ್ರಮಾಣ ಶೇ 1.51 ಇದೆ. ಈವರೆಗೆ ಒಟ್ಟು 4,47,09,676 ಕೋಟಿ ಕೋವಿಡ್ ಪ್ರಕರಣಗಳು ದೇಶದಲ್ಲಿ ದಾಖಲಾಗಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.