ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಪರಿಸ್ಥಿತಿ ಹದಗೆಟ್ಟಿದ್ದರೂ ಪ್ರಧಾನಿ ಒಪ್ಪಿಕೊಳ್ಳಲು ಸಿದ್ಧರಿಲ್ಲ: ಚಿದಂಬರಂ

ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಆರೋಪ
Last Updated 7 ಮೇ 2021, 10:06 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌– 19 ಸಾಂಕ್ರಾಮಿಕದಿಂದಾಗಿ ದೇಶದಾದ್ಯಂತ ಪರಿಸ್ಥಿತಿ ಹದಗೆಡುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿ ಮತ್ತು ಆರೋಗ್ಯ ಸಚಿವ ಹರ್ಷವರ್ಧನ್‌ ಅವರು ತಮ್ಮ ಜವಾಬ್ದಾರಿಯನ್ನು ಅರಿತು ಪರಿಸ್ಥಿತಿ ನಿಭಾಯಿಸದೇ, ಪ್ರಜಾಪ್ರಭುತ್ವದ ಮೌಲ್ಯಗಳನ್ನೇ ಅಣಕಿಸುವಂತೆ ನಡೆದುಕೊಳ್ಳುತ್ತಿದ್ದಾರೆ‘ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಆರೋಪಿಸಿದ್ದಾರೆ.

ಶುಕ್ರವಾರ ಒಂದೇ ದಿನದಲ್ಲಿ 4.14 ಲಕ್ಷ ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಗಳು 36 ಲಕ್ಷ ದಾಟಿವೆ. ಸಾಂಕ್ರಾಮಿಕ ರೋಗ ದೇಶದ ಪರಿಸ್ಥಿತಿಯನ್ನು ತೀರಾ ಹದಗೆಡಿಸುತ್ತಿದೆ. ಇಂಥ ವೇಳೆ ರೋಗದ ವಿರುದ್ಧ ಹೋರಾಡಲು ಬೇಕಾದ ಲಸಿಕೆಗಳ ಕೊರತೆ ಇದೆ. ಆದರೆ, ಸತ್ಯಾಂಶವನ್ನು ಒಪ್ಪಿಕೊಳ್ಳಲು ಸರ್ಕಾರ ಸಿದ್ಧವಿಲ್ಲ’ ಎಂದು ಚಿದಂಬರಂ ಟ್ವೀಟ್‌ ಮಾಡಿದ್ದಾರೆ.

ತಮಿಳುನಾಡಿನಲ್ಲಿ 45 ವರ್ಷ ಮೇಲ್ಪಟ್ಟವರೆಲ್ಲರೂ ಮೊದಲ ಡೋಸ್ ತೆಗೆದುಕೊಂಡಿದ್ದಾರೆ. ಆದರೆ, ಇವರೆಲ್ಲರಿಗೂ ಎರಡನೇ ಡೋಸ್‌ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. 18 ರಿಂದ 44 ವಯೋಮಾನದವರಿಗೂ ಲಸಿಕೆ ಸಿಗುತ್ತಿಲ್ಲ‘ ಎಂದು ಆರೋಪಿಸಿದ್ದಾರೆ.

ಬೇರೆ ರಾಜ್ಯಗಳಲ್ಲಿ ಪರಿಸ್ಥಿತಿ ಇನ್ನೂ ಭಿನ್ನವಾಗಿದೆ. ಇಂಥ ಸಂದರ್ಭದಲ್ಲಿ ಪ್ರಧಾನಿ ಮತ್ತು ಆರೋಗ್ಯ ಸಚಿವರು ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದ್ದು, ಪ್ರಜಾಪ್ರಭುತ್ವದ ತತ್ವಗಳನ್ನು ಅಣಕಿಸುತ್ತಿದ್ದಾರೆ‘ ಎಂದು ಚಿದಂಬರಂ ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT