ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಲಾಕ್‌ಡೌನ್‌ ಘೋಷಿಸುವ ಯೋಚನೆ ಇಲ್ಲ: ಕೇಜ್ರಿವಾಲ್‌ ಸ್ಪಷ್ಟನೆ

Last Updated 2 ಏಪ್ರಿಲ್ 2021, 12:54 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಲಾಕ್‌ಡೌನ್‌ ಘೋಷಿಸುವ ಬಗೆಗಿನ ಯಾವುದೇ ಯೋಚನೆ ಸರ್ಕಾರದ ಮುಂದಿಲ್ಲವೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಶುಕ್ರವಾರ ಮಾತನಾಡಿರುವ ಅವರು, 'ಕಳೆದ ಕೆಲ ದಿನಗಳಲ್ಲಿ ದೆಹಲಿಯಾದ್ಯಂತ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿವೆ. ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 3,583 ಹೊಸ ಪ್ರಕರಣಗಳು ವರದಿಯಾಗಿವೆ. ನಾವು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಜನರು ಆತಂಕಪಡುವ ಅಗತ್ಯವಿಲ್ಲ' ಎಂದು ಹೇಳಿದ್ದಾರೆ.

ನಾವು ಕೋವಿಡ್‌ ಲಸಿಕೆ ವಿತರಣೆ ಮೇಲೆ ಗಮನ ಹರಿಸಿದ್ದೇವೆ. ನಿನ್ನೆ(ಗುರುವಾರ) ದೆಹಲಿಯಲ್ಲಿ 71,000 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ದೆಹಲಿಯ ಆರೋಗ್ಯ ಸಚಿವ ಸತ್ಯೇಂದರ್‌ ಜೈನ್‌ ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಅರವಿಂದ್‌ ಕೇಜ್ರಿವಾಲ್‌ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 81,466 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 469 ಸೋಂಕಿತರು ಮೃತಪಟ್ಟಿದ್ದಾರೆ ಮತ್ತು 50,356 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT