ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

India Covid Update: 2,424 ಮಂದಿಗೆ ಕೋವಿಡ್, ಸಕ್ರಿಯ ಪ್ರಕರಣಗಳು ಅಲ್ಪ ಇಳಿಕೆ

Last Updated 10 ಅಕ್ಟೋಬರ್ 2022, 6:24 IST
ಅಕ್ಷರ ಗಾತ್ರ

ನವದೆಹಲಿ:ದೇಶದಲ್ಲಿ ಕೋವಿಡ್–19 ದೃಢಪಟ್ಟ2,424 ಹೊಸ ಪ್ರಕರಣಗಳು ಕಳೆದ 24 ಗಂಟೆಗಳಲ್ಲಿ ವರದಿಯಾಗಿವೆ. ಇದರೊಂದಿಗೆಸಕ್ರಿಯ ಪ್ರಕರಣಗಳಲ್ಲಿ ಅಲ್ಪ ಇಳಿಕೆ ಕಂಡುಬಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಹೇಳಿದೆ.

ಸದ್ಯ ದೇಶದಲ್ಲಿ 28,079 ಪ್ರಕರಣಗಳು ಸಕ್ರಿಯವಾಗಿವೆ. ಭಾನುವಾರ28,593 ಪ್ರಕರಣಗಳು ಸಕ್ರಿಯವಾಗಿದ್ದವು.

ಸಚಿವಾಲಯ ಇಂದು ಬೆಳಗ್ಗೆ 8ಕ್ಕೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ದೇಶದಲ್ಲಿ ಇದುವರೆಗೆ ಪತ್ತೆಯಾಗಿರುವ ಪ್ರಕರಣಗಳ ಸಂಖ್ಯೆ4,46,14,437ಕ್ಕೆ ತಲುಪಿದೆ. ಈ ಪೈಕಿ ಕಳೆದ 24 ಗಂಟೆಗಳಲ್ಲಿ ಗುಣಮುಖರಾಗಿರುವ2,923 ಮಂದಿಯೂ ಸೇರಿದಂತೆ ಈವರೆಗೆ4,40,57,544 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಹೊಸದಾಗಿ ವರದಿಯಾಗಿರುವ15 ಸಾವು ಸೇರಿ ಒಟ್ಟು5,28,814 ಮಂದಿ ಮೃತಪಟ್ಟಿದ್ದಾರೆ.

ಒಟ್ಟಾರೆ ಪ್ರಕರಣಗಳಿಗೆ ಹೋಲಿಸಿದರೆ, ಸಕ್ರಿಯ ಪ್ರಕರಣಗಳ ಪ್ರಮಾಣ ಶೇ0.06 ರಷ್ಟಿದೆ. ಗುಣಮುಖರಾದವರ ಪ್ರಮಾಣ ಶೇ98.75 ರಷ್ಟು ಇದೆ. ದೈನಂದಿನ ಸೋಂಕು ದೃಢ ದರ ಶೇ2.65 ಮತ್ತು ವಾರದ ಸೋಂಕು ದೃಢ ದರ ಶೇ1.27 ಆಗಿದೆ ಎಂದು ಸಚಿವಾಲಯ ಹೇಳಿದೆ.

ಇಲಾಖೆಯ ಮಾಹಿತಿ ಪ್ರಕಾರ ಇದುವರೆಗೆ218.99 ಕೋಟಿ ಡೋಸ್‌ ಕೋವಿಡ್ ಲಸಿಕೆ ವಿತರಿಸಲಾಗಿದೆ.

ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ 2020ರ ಆಗಸ್ಟ್‌ 7 ರಂದು 20 ಲಕ್ಷದ ಗಡಿ ದಾಟಿತ್ತು. ಅದೇ ವರ್ಷದ ಆಗಸ್ಟ್‌ 23ರಂದು 30 ಲಕ್ಷ, ಸೆಪ್ಟೆಂಬರ್‌ 5ರಂದು 40 ಲಕ್ಷ ಮತ್ತು ಸೆಪ್ಟೆಂಬರ್ 16ರಂದು 50 ಲಕ್ಷ ಪ್ರಕರಣಗಳು ವರದಿಯಾಗಿದ್ದವು. ನಂತರ ಸೆಪ್ಟೆಂಬರ್‌ 28, ಅಕ್ಟೋಬರ್‌ 11, ಅಕ್ಟೋಬರ್‌ 29 ಹಾಗೂ ನವಂಬರ್‌ 20ರಂದು ಕ್ರಮವಾಗಿ 60 ಲಕ್ಷ, 70 ಲಕ್ಷ, 80 ಲಕ್ಷ ಹಾಗೂ 90 ಲಕ್ಷ ಪ್ರಕರಣಗಳು ದಾಖಲಾಗಿದ್ದವು.

ಕೋವಿಡ್‌ ಪ್ರಕರಣಗಳ ಒಟ್ಟು ಸಂಖ್ಯೆ2020ರ ಡಿಸೆಂಬರ್‌ 19ರಂದು ಒಂದು ಕೋಟಿ, 2021ರ ಮೇ 4 ರಂದು ಎರಡು ಕೋಟಿ ಹಾಗೂ ಜೂನ್‌ 23ರಂದು ಮೂರು ಕೋಟಿಗಡಿ ದಾಟಿತ್ತು. ಈ ಸಂಖ್ಯೆಇದೇ ವರ್ಷ (2022) ಜನವರಿ 25ರಂದು ನಾಲ್ಕು ಕೋಟಿಗಿಂತ ಹೆಚ್ಚಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT