ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

India Covid Update: ಹೊಸದಾಗಿ 20,279 ಪ್ರಕರಣ ದೃಢ

Last Updated 24 ಜುಲೈ 2022, 4:42 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಭಾನುವಾರ ಬೆಳಿಗ್ಗೆ ಕೊನೆಗೊಂಡ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 20,279 ಕೋವಿಡ್ ಪ್ರಕರಣಗಳುವರದಿಯಾಗಿದ್ದು,36 ಮಂದಿ ಮೃತಪಟ್ಟಿದ್ದಾರೆಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಈ ಪ್ರಮಾಣ ಶನಿವಾರಕ್ಕೆ ಹೋಲಿಸಿದರೆ ಶೇ 5.3ರಷ್ಟು ಕಡಿಮೆಯಾಗಿದೆ. ಶನಿವಾರದಂದು 21,411 ಕೊರೊನಾ ಸೋಂಕು ಪ್ರಕರಣ ವರದಿಯಾಗಿದ್ದವು.

ದೇಶದಲ್ಲಿ ಕೊರೊನಾ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1,52,200ಕ್ಕೆ ತಲುಪಿದೆ. ಈ ಮೂಲಕ ಸಕ್ರಿಯ ಪ್ರಕರಣಗಳಲ್ಲೂ (2,100) ಹೆಚ್ಚಳ ಕಂಡುಬಂದಿದೆ.

ದೇಶದಲ್ಲಿ ಈವರೆಗೆ 4,38,88,755 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,26,033 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಪೈಕಿ ಶೇ 0.35 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.45 ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT