ಸೋಮವಾರ, ಸೆಪ್ಟೆಂಬರ್ 27, 2021
22 °C

ಕೋವಿಡ್ ಲಸಿಕೆ ಕ್ಲಿನಿಕಲ್ ಟ್ರಯಲ್ ಮಾಹಿತಿ ಬಹಿರಂಗ: ಕೇಂದ್ರಕ್ಕೆ ಸುಪ್ರೀಂ ನೋಟಿಸ್

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್ -19 ಲಸಿಕೆಗಳ ಕ್ಲಿನಿಕಲ್ ಪ್ರಯೋಗಗಳಿಗೆ ಸಂಬಂಧಿಸಿದ ದತ್ತಾಂಶ ಬಹಿರಂಗಪಡಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್‌, ಕೇಂದ್ರ ಮತ್ತು ಇತರರಿಂದ ಪ್ರತಿಕ್ರಿಯೆ ಕೇಳಿದೆ.‌

ನ್ಯಾಯಮೂರ್ತಿಗಳಾದ ಎಲ್‌. ನಾಗೇಶ್ವರರಾವ್ ಮತ್ತು ಅನಿರುದ್ಧ ಬೋಸ್‌ ಅವರನ್ನೊಳಗೊಂಡ ನ್ಯಾಯಪೀಠವು, ಈ ಅರ್ಜಿ ಸಂಬಂಧ ಕೇಂದ್ರ ಸರ್ಕಾರ ಮತ್ತು ಇತರೆ ಸಂಬಂಧಪಟ್ಟವರಿಗೆ ನೋಟಿಸ್‌ ನೀಡಿದ್ದು, ನಾಲ್ಕು ವಾರಗಳೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ತಿಳಿಸಿದೆ.

ಓದಿ: 

ಲಸಿಕೆ ಹಾಕಿಸಿಕೊಳ್ಳಲು ಕೆಲವು ಜನರು ಹಿಂದೇಟು ಹಾಕುತ್ತಿರುವುದನ್ನು ಅರ್ಜಿ ವಿಚಾರಣೆ ವೇಳೆ ಉಲ್ಲೇಖಿಸಿದ ನ್ಯಾಯಪೀಠ, ‘ಲಸಿಕೆಯ ಕ್ಲಿನಿಕಲ್  ಪ್ರಯೋಗಗಳ ದತ್ತಾಂಶ ಬಹಿರಂಗಕ್ಕೆ ಅವಕಾಶ ನೀಡಿದರೆ, ಲಸಿಕೆ ಕುರಿತು ನಾಗರಿಕರ ಮನಸ್ಸಿನಲ್ಲಿ ಗೊಂದಲ ಉಂಟಾಗುವುದಿಲ್ಲವೇ’ ಎಂದು ಅರ್ಜಿದಾರರ ಪರ ವಕೀಲ ಪ್ರಶಾಂತ ಭೂಷಣ್ ಅವರನ್ನು ಕೇಳಿತು. 

ಇದಕ್ಕೆ ಪ್ರತಿಕ್ರಿಯಿಸಿದ ವಕೀಲ ಪ್ರಶಾಂತ ಭೂಷಣ್, ‘ಇದು ಲಸಿಕೆ ವಿರೋಧಿ ಅರ್ಜಿಯಲ್ಲ. ಹಾಗೆಯೇ, ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನ ನಿಲ್ಲಿಸುವ ಪ್ರಯತ್ನವೂ ಅಲ್ಲ. ಬದಲಿಗೆ, ಲಸಿಕೆ ಹಾಕುವ ವಿಷಯದಲ್ಲಿ ಪಾರದರ್ಶಕತೆ ಅವಶ್ಯವಾಗಿದೆ. ಈ ಹಿನ್ನೆಲೆಯಲ್ಲಿ ಲಸಿಕೆಯ ಪ್ರಾಯೋಗಿಕ ದತ್ತಾಂಶಗಳನ್ನು ಬಹಿರಂಗಪಡಿಸುವುದರಿಂದ ಜನರಲ್ಲಿರುವ ಅನುಮಾನವನ್ನು ನಿವಾರಿಸಿದಂತಾಗುತ್ತದೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು