ಬುಧವಾರ, ಜನವರಿ 19, 2022
26 °C

ಮಧುರೈ: ಲಸಿಕೆ ಹಾಕಿಸಿಕೊಳ್ಳದವರಿಗೆ ಹೋಟೆಲ್, ಮಾಲ್‌ಗಳ ಪ್ರವೇಶಕ್ಕೆ ಅವಕಾಶ ಇಲ್ಲ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಮಧುರೈ(ತಮಿಳುನಾಡು): ಕೋವಿಡ್‌ ಲಸಿಕೆ ಹಾಕಿಸಿಕೊಳ್ಳದವರಿಗೆ ಮುಂದಿನ ವಾರದಿಂದ ಮಾಲ್‌, ಹೋಟೆಲ್‌ ಸೇರಿದಂತೆ ಇತರ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ಇಲ್ಲವೆಂದು  ಮಧುರೈ ಜಿಲ್ಲಾಡಳಿತ ತಿಳಿಸಿದೆ.

ಈ ನಿರ್ಬಂಧಗಳು ಜಾರಿಗೆ ಬರುವ ಮೊದಲು ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ ಪಡೆಯಲು ಜನರಿಗೆ ಒಂದು ವಾರದ ಗಡುವು ನೀಡಲಾಗುತ್ತಿದೆ ಎಂಬುದಾಗಿ ಜಿಲ್ಲಾಡಳಿತ ಹೇಳಿದೆ ಎಂದು ಸುದ್ದಿಸಂಸ್ಥೆ ಎಎನ್‌ಐ ಟ್ವೀಟ್‌ ಮಾಡಿದೆ.

‘ಜನರಿಗೆ ಕನಿಷ್ಠ ಒಂದು ಡೋಸ್ ಕೋವಿಡ್‌ ಲಸಿಕೆಯನ್ನು ಪಡೆಯಲು ಒಂದು ವಾರದ ಸಮಯವನ್ನು ನೀಡಲಾಗಿದೆ. ಲಸಿಕೆ ಪಡೆಯಲು ವಿಫಲರಾದ ಜನರಿಗೆ ಹೋಟೆಲ್‌ಗಳು, ಶಾಪಿಂಗ್ ಮಾಲ್‌ಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಿಸಲು ಅನುಮತಿ ನೀಡುವುದಿಲ್ಲ‘ ಎಂದು ಮಧುರೈ ಜಿಲ್ಲಾಧಿಕಾರಿ ಅನೀಶ್ ಶೇಖರ್ ತಿಳಿಸಿದ್ದಾರೆ. 

ದೇಶದಾದ್ಯಂತ ಶುಕ್ರವಾರದ ವೇಳೆಗೆ 126 ಕೋಟಿ ಡೋಸ್‌ಗೂ ಹೆಚ್ಚು ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು