ನವದೆಹಲಿ: ಕಳೆದ 24 ಗಂಟೆಗಳಲ್ಲಿ 56 ಲಕ್ಷಕ್ಕೂ ಹೆಚ್ಚು ಡೋಸ್ ಲಸಿಕೆಗಳನ್ನು ನೀಡಲಾಗಿದೆ. ಇದರೊಂದಿಗೆ ಶನಿವಾರದ ಹೊತ್ತಿಗೆ ಭಾರತದಲ್ಲಿ 165.04 ಕೋಟಿ ಡೋಸ್ ಲಸಿಕೆಗಳನ್ನು ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

‘ಒಟ್ಟು 165 ಕೋಟಿ ಲಸಿಕೆಗಳು! ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವ ಮತ್ತು ಕೋವಿಡ್ ವಿರುದ್ಧದ ರಾಷ್ಟ್ರದ ಸಾಮೂಹಿಕ ಹೋರಾಟದೊಂದಿಗೆ ಭಾರತವು ಈಗ 165 ಕೋಟಿಗೂ ಹೆಚ್ಚು ಡೋಸ್ ಲಸಿಕೆಗಳನ್ನು ನೀಡಿದೆ" ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ನಲ್ಲಿ ತಿಳಿಸಿದ್ದಾರೆ.

ಜನವರಿ 3 ರಂದು 15ರಿಂದ 18ರ ವರೆಗಿನ ಯಸ್ಸಿನವರಿಗೂ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು. ಈ ವರೆಗೆ 4,50,05,663 ಮಂದಿ ಲಸಿಕೆ ಪಡೆದಿದ್ದಾರೆ. ಲಸಿಕೆ ಪಡೆದ ಯುವ ಸಮುದಾಯಕ್ಕೆ ಸಚಿವ ಮಾಂಡವೀಯ ಅವರು ಇದೇ ವೇಳೆ ಅಭಿನಂದನೆಗಳನ್ನೂ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.