ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಠಿಣ ಕ್ರಮ ತೆಗೆದುಕೊಂಡರೆ ಮೂರನೇ ಅಲೆ ಇರದು: ಪ್ರಧಾನ ವೈಜ್ಞಾನಿಕ ಸಲಹೆಗಾರ

Last Updated 7 ಮೇ 2021, 16:20 IST
ಅಕ್ಷರ ಗಾತ್ರ

ನವದೆಹಲಿ: ‘ಕಠಿಣ ಕ್ರಮಗಳನ್ನು ಕೈಗೊಂಡರೆ ದೇಶದಲ್ಲಿ ಕೊರೊನಾ ಸೋಂಕಿನ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆ ಇರುವುದಿಲ್ಲ’ ಎಂದು ಕೇಂದ್ರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಕೆ.ವಿಜಯರಾಘವನ್‌ ಶುಕ್ರವಾರ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋವಿಡ್‌–19 ಪ್ರಸರಣ ತಡೆಯಲು ರೂಪಿಸಿರುವ ಮಾರ್ಗಸೂಚಿಗಳನ್ನುಗ್ರಾಮಗಳು, ಜಿಲ್ಲೆಗಳು ಹಾಗೂ ರಾಜ್ಯಗಳಲ್ಲಿ ಎಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದೆ ಎಂಬುದರ ಮೇಲೆ ಮೂರನೇ ಅಲೆ ಕಾಣಿಸಿಕೊಳ್ಳುವುದು ಅವಲಂಬಿಸಿದೆ’ ಎಂದರು.

ದೇಶದಲ್ಲಿ ಕೊರೊನಾ ಸೋಂಕಿನ ಮೂರನೇ ಅಲೆ ಅನಿವಾರ್ಯ ಎಂಬ ಹೇಳಿಕೆ ನೀಡಿದ ಎರಡೇ ದಿನದೊಳಗೆ ಅವರಿಂದ ಈ ಅಭಿಪ್ರಾಯ ವ್ಯಕ್ತವಾಗಿದೆ.

ವಿಜಯರಾಘವನ್‌ ಅವರ ಹೇಳಿಕೆ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿತ್ತು. ಕೋವಿಡ್‌ ಪಿಡುಗಿನ ನಿರ್ವಹಣೆ ಮಾಡುವಲ್ಲಿ ಮೋದಿ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT