ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈನಲ್ಲಿ ಕೋವಿಡ್‌ ಪ್ರಕರಣ ಶೇ 42ರಷ್ಟು ಹೆಚ್ಚಳ

Last Updated 8 ಜೂನ್ 2022, 15:33 IST
ಅಕ್ಷರ ಗಾತ್ರ

ಮುಂಬೈ: ಬುಧವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್‌–19 ದೃಢಪಟ್ಟ 1,765 ಹೊಸ ಪ್ರಕರಣಗಳು ದಾಖಲಾಗಿವೆ. ಜನವರಿ 26ರ ನಂತರ ಒಂದೇ ದಿನದಲ್ಲಿ ದಾಖಲಾಗಿರುವ ಗರಿಷ್ಠ ಪ್ರಕರಣಗಳು ಇದಾಗಿದೆ. ಆದರೆ, ಸೋಂಕಿನ ಕಾರಣಗಳಿಂದಾಗಿ ಸಾವು ಸಂಭವಿಸಿಲ್ಲ.

ಮಂಗಳವಾರಕ್ಕಿಂತ 523 ಅಧಿಕ ಹೊಸ ಪ್ರಕರಣಗಳು ದಾಖಲಾಗಿದ್ದು, ಪ್ರಕರಣಗಳ ಸಂಖ್ಯೆ ಶೇಕಡ 42ರಷ್ಟು ಏರಿಕೆಯಾದಂತಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 7,000 ತಲುಪಿರುವುದಾಗಿ ಬೃಹನ್‌ಮುಂಬೈ ಮುನ್ಸಿಪಲ್‌ ಕಾರ್ಪೊರೇಷನ್‌ (ಬಿಎಂಸಿ) ಪ್ರಕಟಿಸಿದೆ.

1,765 ಹೊಸ ಪ್ರಕರಣಗಳ ಪೈಕಿ 1,682 ಜನರಲ್ಲಿ ಸೋಂಕಿನ ಲಕ್ಷಣಗಳು ಕಂಡು ಬಂದಿಲ್ಲ. ಇಂದು 19,185 ಮಾದರಿಗಳಿಗೆ ಕೋವಿಡ್‌ ಪರೀಕ್ಷೆ ನಡೆಸಿದ್ದು, ಕೋವಿಡ್‌ ಪಾಸಿಟಿವಿಟಿ ದರ ಶೇ 0.091ರಷ್ಟಿದೆ.

ಇದೇ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ 2,701 ಹೊಸ ಪ್ರಕರಣಗಳು ವರದಿಯಾಗಿವೆ. ಇದು ಕಳೆದ ನಾಲ್ಕು ತಿಂಗಳಲ್ಲೇ ದಾಖಲಾಗಿರುವ ಗರಿಷ್ಠ ಪ್ರಮಾಣವಾಗಿದೆ.

ಈವರೆಗಿನ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 10,73,541 ತಲುಪಿದ್ದು, 19,569 ಮಂದಿ ಸಾವಿಗೀಡಾಗಿದ್ದಾರೆ.

ಜನವರಿ 26ರಂದು ಮುಂಬೈನಲ್ಲಿ 1,858 ಪ್ರಕರಣಗಳು ದಾಖಲಾಗಿದ್ದವು ಹಾಗೂ 13 ಮಂದಿ ಸಾವಿಗೀಡಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT