ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಹೆಚ್ಚಳ; ದೆಹಲಿಯಲ್ಲಿ ಮತ್ತೆ ಮಾಸ್ಕ್‌ ಕಡ್ಡಾಯ, ತಪ್ಪಿದರೆ ₹500 ದಂಡ

Last Updated 20 ಏಪ್ರಿಲ್ 2022, 8:44 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸುವುದನ್ನು ದೆಹಲಿ ಸರ್ಕಾರ ಕಡ್ಡಾಯಗೊಳಿಸಿದೆ. ನಿಯಮ ಉಲ್ಲಂಘಿಸಿದರೆ ₹500 ದಂಡ ವಿಧಿಸುವಂತೆ ಸರ್ಕಾರ ಬುಧವಾರ ಸೂಚಿಸಿದೆ.

ಮಕ್ಕಳಲ್ಲಿಯೂ ಸೋಂಕು ಹೆಚ್ಚಿದ್ದು ಶಾಲೆಗಳನ್ನು ಮುಚ್ಚುವ ಬಗ್ಗೆ ಚರ್ಚೆ ನಡೆಸಲಾಗಿದೆ. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ಶಾಲೆಗಳನ್ನು ನಡೆಸುವ ಬಗ್ಗೆ ಪ್ರತ್ಯೇಕ ಮಾರ್ಗಸೂಚಿ ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದ್ದು, ಶಾಲೆ ಮುಚ್ಚುವ ನಿರ್ಧಾರದಿಂದ ಹಿಂದೆ ಸರಿದಿದೆ.

ಕಡ್ಡಾಯವಾಗಿ ಮಾಸ್ಕ್‌ ಬಳಕೆಗೆ ಸಂಬಂಧಿಸಿದಂತೆ ಸರ್ಕಾರವು ಇನ್ನಷ್ಟೇ ಅಧಿಕೃತ ಆದೇಶ ಹೊರಡಿಸಬೇಕಿದೆ. ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್‌ ಪರೀಕ್ಷೆ ಹೆಚ್ಚಿಸುವುದು ಹಾಗೂ ಹೆಚ್ಚಿನ ಜನ ಸೇರುವ ಕಡೆ ನಿಗಾವಹಿಸುವಂತೆ ಸೂಚಿಸಲಾಗಿದೆ.

ಮಂಗಳವಾರ ದೆಹಲಿಯಲ್ಲಿ ಕೋವಿಡ್‌–19 ಹೊಸ ಪ್ರಕರಣಗಳ ಸಂಖ್ಯೆ ಶೇಕಡ 26ರಷ್ಟು ಏರಿಕೆಯಾಗಿದೆ. ಬುಧವಾರ 632 ಹೊಸ ಪ್ರಕರಣಗಳು ವರದಿಯಾಗಿವೆ ಹಾಗೂ ಕೋವಿಡ್‌ ಪಾಸಿಟಿವಿಟಿ ದರ ಶೇಕಡ 4.42ರಷ್ಟಿದೆ. ಸೋಮವಾರ ದೆಹಲಿಯಲ್ಲಿ 501 ಪ್ರಕರಣಗಳು ದಾಖಲಾಗಿದ್ದವು ಹಾಗೂ ಪಾಸಿಟಿವಿಟಿ ದರ ಶೇಕಡ 7.72ರಷ್ಟಿತ್ತು.

ಬುಧವಾರ ಬೆಳಗ್ಗಿನವರೆಗೂ 24 ಗಂಟೆಗಳ ಅಂತರದಲ್ಲಿ ದೇಶದಲ್ಲಿ 2,067 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 12,340ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಇದೇ ಅವಧಿಯಲ್ಲಿ 40 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT