ಶುಕ್ರವಾರ, ಜೂನ್ 18, 2021
28 °C

Covid-19 India Update: 24 ಗಂಟೆಗಳಲ್ಲಿ 63,489 ಹೊಸ ಪ್ರಕರಣ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಕೊರೊನಾ ವೈರಸ್ ಸೋಂಕು ಪರೀಕ್ಷೆ– ಪ್ರಾತಿನಿಧಿಕ ಚಿತ್ರ

ಬೆಂಗಳೂರು: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 63,489 ಹೊಸ ಪ್ರಕರಣಗಳು ದಾಖಲಾಗಿವೆ ಹಾಗೂ ಇದೇ ಅವಧಿಯಲ್ಲಿ 944 ಮಂದಿ ಸೋಂಕಿನಿಂದ ಮೃತಪಟ್ಟಿರುವುದಾಗಿ   ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಒಟ್ಟು 25,89,682 ಕೊರೊನಾ ವೈರಸ್‌ ಸೋಂಕಿತರ ಪೈಕಿ ಈವರೆಗೂ 18,62,258 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಹಾಗೂ 49,980 ಮಂದಿ ಸಾವಿಗೀಡಾಗಿದ್ದಾರೆ. ಭಾರತದಲ್ಲಿ ಪ್ರಸ್ತುತ 6,77,444 ಸಕ್ರಿಯ ಪ್ರಕರಣಗಳಿವೆ.

ಶನಿವಾರ 8,68,679 ಗಂಟಲು ಮಾದರಿಗಳ ಕೋವಿಡ್‌ ಪರೀಕ್ಷೆ ನಡೆಸಲಾಗಿದ್ದು, ಈವರೆಗೂ 2.85 ಕೋಟಿ ಪರೀಕ್ಷೆಗಳನ್ನು ಪೂರೈಸಿರುವುದಾಗಿ ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ 1,56,719 ಸಕ್ರಿಯ ಪ್ರಕರಣಗಳಿದ್ದು, 4,08,286 ಮಂದಿ ಗುಣಮುಖರಾಗಿದ್ದಾರೆ ಹಾಗೂ 19,749 ಮಂದಿ ಸಾವಿಗೀಡಾಗಿದ್ದಾರೆ. ರಾಜಧಾನಿ ದೆಹಲಿಯಲ್ಲಿ 11,489 ಸಕ್ರಿಯ ಪ್ರಕರಣಗಳಿದ್ದು, 1,36,251 ಮಂದಿ ಗುಣಮುಖರಾಗಿದ್ದಾರೆ. ಈವರೆಗೂ ಸೋಂಕಿನಿಂದ 4,188  ಮಂದಿ ಮೃತಪಟ್ಟಿದ್ದಾರೆ.

ತಮಿಳುನಾಡಿನಲ್ಲಿ 54,213 ಸಕ್ರಿಯ ಪ್ರಕರಣಗಳಿದ್ದು, 2,72,251 ಮಂದಿ ಗುಣಮುಖರಾಗಿದ್ದಾರೆ ಹಾಗೂ 5,641ಮಂದಿ ಸಾವಿಗೀಡಾಗಿದ್ದಾರೆ. ಕರ್ನಾಟಕದಲ್ಲಿ 81,284 ಸಕ್ರಿಯ ಪ್ರಕರಣಗಳಿವೆ ಹಾಗೂ 1,34,811 ಮಂದಿ ಗುಣಮುಖರಾಗಿದ್ದಾರೆ. 3,831 ಮಂದಿ ಮೃತಪಟ್ಟಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು