ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶದಲ್ಲಿ ಮಹಿಳೆ ಸಾವು: ಡೆಲ್ಟಾ ಪ್ಲಸ್‌ ದೃಢ

Last Updated 24 ಜೂನ್ 2021, 9:12 IST
ಅಕ್ಷರ ಗಾತ್ರ

ಭೋಪಾಲ್: ಮಧ್ಯಪ್ರದೇಶದಲ್ಲಿ ಕೊರೊನಾ ವೈರಸ್‌ ರೂಪಾಂತರಿ ತಳಿ ‘ಡೆಲ್ಟಾ ಪ್ಲಸ್‌’ ಸೋಂಕು ಐವರಲ್ಲಿ ದೃಡಪಟ್ಟಿದ್ದು, ಅವರಲ್ಲಿ ಒಬ್ಬರು ಮಹಿಳೆ ಮೃತಪಟ್ಟಿದ್ದಾರೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್‌ ಸರಂಗ್ ಗುರುವಾರ ತಿಳಿಸಿದರು.

ಕೋವಿಡ್‌ ಲಸಿಕೆ ಹಾಕಿಸಿಕೊಂಡಿದ್ದ ಇತರ ನಾಲ್ವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಮರಣ ಹೊಂದಿದ ವ್ಯಕ್ತಿ ಉಜ್ಜೈನಿ ಮೂಲದವರಾಗಿದ್ದು, ಅವರು ಲಸಿಕೆ ಪಡೆದಿರಲಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಉಜ್ಜೈನಿಯ 59 ವರ್ಷದ ಮಹಿಳೆ ಮೇ 23ರಂದು ಮೃತರಾಗಿದ್ದರು. ಅವರಿಗೆ ಮೇ 17ರಂದು ಕೋವಿಡ್‌ ದೃಢಪಟ್ಟಿತ್ತು. ಅವರಿಗೆ ರೂಪಾಂತರಿತ ತಳಿಯಾದ ‘ಡೆಲ್ಟಾ ಪ್ಲಸ್‌’ನಿಂದ ಸೋಂಕು ತಗುಲಿರುವುದು ಮಂಗಳವಾರ ಗೊತ್ತಾಗಿದೆ ಎಂದು ಉಜ್ಜೈನಿಯ ಜಿಲ್ಲಾಧಿಕಾರಿ ಆಶಿಶ್‌ ಸಿಂಗ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT