ಸೋಮವಾರ, ಜನವರಿ 24, 2022
29 °C

Covid-19 India: 24 ಗಂಟೆಗಳಲ್ಲಿ 1.59 ಲಕ್ಷಕ್ಕೂ ಅಧಿಕ ಪ್ರಕರಣಗಳು

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದಾದ್ಯಂತ ಕೋವಿಡ್‌–19 ದೃಢಪಟ್ಟ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದ್ದು, 24 ಗಂಟೆಗಳ ಅಂತರದಲ್ಲಿ 1,59,632 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 327 ಮಂದಿ ಸಾವಿಗೀಡಾಗಿದ್ದಾರೆ.

ಕೋವಿಡ್‌ ದೃಢ ಪ್ರಮಾಣ ಶೇಕಡ 10.21ಕ್ಕೆ ಏರಿಕೆಯಾಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 3.55 ಕೋಟಿ ದಾಟಿದ್ದು, ಈವರೆಗೂ 3.44 ಕೋಟಿಗೂ ಹೆಚ್ಚು ಜನರು ಗುಣಮುಖರಾಗಿದ್ದಾರೆ ಹಾಗೂ 4,83,790 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ 5,90,611 ಸಕ್ರಿಯ ಪ್ರಕರಣಗಳಿವೆ.

ಒಟ್ಟು ಪ್ರಕರಣಗಳ ಪೈಕಿ ಓಮೈಕ್ರಾನ್‌ ದೃಢಪಟ್ಟ 3,623 ಪ್ರಕರಣಗಳಿದ್ದು, ಈಗಾಗಲೇ 1,409 ಜನರು ಗುಣಮುಖರಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 1,009 ಓಮೈಕ್ರಾನ್‌ ಪ್ರಕರಣಗಳು ದಾಖಲಾಗಿವೆ.

ಈವರೆಗೂ ದೇಶದಾದ್ಯಂತ 151.58 ಕೋಟಿಗೂ ಅಧಿಕ ಡೋಸ್‌ಗಳಷ್ಟು ಲಸಿಕೆ ವಿತರಣೆಯಾಗಿದೆ.

ಇದನ್ನೂ ಓದಿ:

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು