ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ದೇಶದಲ್ಲಿ 154 ದಿನಗಳಲ್ಲೇ ಅತಿ ಕಡಿಮೆ ಪ್ರಕರಣಗಳು

Last Updated 17 ಆಗಸ್ಟ್ 2021, 8:50 IST
ಅಕ್ಷರ ಗಾತ್ರ

ನವದೆಹಲಿ: ಭಾರತದಲ್ಲಿ ಮಂಗಳವಾರ 24 ಗಂಟೆಗಳ ಅವಧಿಯಲ್ಲಿ ಕೋವಿಡ್‌–19 ದೃಢಪಟ್ಟ 25,166 ಹೊಸ ಪ್ರಕರಣಗಳು ದಾಖಲಾಗಿವೆ. ಇದು ಕಳೆದ 154 ದಿನಗಳಲ್ಲೇ ಕನಿಷ್ಠ ಪ್ರಕರಣಗಳಾಗಿವೆ. ಇದೇ ಅವಧಿಯಲ್ಲಿ 36,830 ಮಂದಿ ಗುಣಮುಖರಾಗಿದ್ದು, 437 ಜನ ಸಾವಿಗೀಡಾಗಿದ್ದಾರೆ.

ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 146 ದಿನಗಳ ಕನಿಷ್ಠ, 3,69,846 ತಲುಪಿದೆ ಹಾಗೂ ಚೇತರಿಕೆ ಪ್ರಮಾಣ ಶೇ 97.51ರಷ್ಟಿದೆ.

ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 3.22 ಕೋಟಿಗೆ ಏರಿಕೆಯಾಗಿದ್ದು, ಈ ಪೈಕಿ 3.14 ಕೋಟಿಗೂ ಹೆಚ್ಚು ಜನರು ಗುಣಮುಖರಾಗಿದ್ದಾರೆ. ಕೋವಿಡ್‌ ಕಾರಣಗಳಿಂದಾಗಿ ಈವರೆಗೂ 4,32,079 ಮಂದಿ ಮೃತಪಟ್ಟಿರುವುದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಟಣೆಯಿಂದ ತಿಳಿದು ಬಂದಿದೆ.

ದೇಶದಾದ್ಯಂತ 55.47 ಕೋಟಿಗೂ ಅಧಿಕ ಡೋಸ್‌ ಕೋವಿಡ್‌–19 ಲಸಿಕೆ ಹಾಕಲಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 56.81 ಕೋಟಿಗೂ ಹೆಚ್ಚು ಡೋಸ್‌ ಲಸಿಕೆ ಹಂಚಿಕೆಯಾಗಿದ್ದು, ಅವುಗಳಲ್ಲಿ 2.25 ಕೋಟಿಗೂ ಅಧಿಕ ಡೋಸ್‌ ಲಸಿಕೆ ಬಳಕೆಯಾಗದೆ ಉಳಿದಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT