ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: 30 ಲಕ್ಷಕ್ಕೂ ಹೆಚ್ಚು ಮಂದಿ ಕೊರೊನಾದಿಂದ ಚೇತರಿಕೆ

Last Updated 4 ಸೆಪ್ಟೆಂಬರ್ 2020, 14:41 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 30 ಲಕ್ಷ ದಾಟಿದೆ. ಈವರೆಗೆ ಒಟ್ಟು 30,37,151 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳಲ್ಲಿ ಶೇ 0.5ಕ್ಕಿಂತಲೂ ಕಡಿಮೆ ಸೋಂಕಿತರಿಗಷ್ಟೇ ವೆಂಟಿಲೇಟರ್ ನೆರವಿನಿಂದ ಚಿಕಿತ್ಸೆ ನೀಡಬೇಕಾಗಿ ಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ತಿಳಿಸಿದೆ.

ಒಟ್ಟು ಪ್ರಕರಣಗಳ ಪೈಕಿ ಶೇ 2ರಷ್ಟು ಮಂದಿ ತೀವ್ರ ನಿಗಾ ಘಟಕಗಳಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾದಿಂದ ಸಂಭವಿಸುವ ಸಾವಿನ ಪ್ರಮಾಣ ದೇಶದಲ್ಲಿ ಸದ್ಯ ಶೇ 1.74ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

‘24 ಗಂಟೆಗಳಲ್ಲಿ 66,659 ಮಂದಿ ಗುಣಮುಖರಾಗಿದ್ದಾರೆ. ಸತತ ಎಂಟು ದಿನಗಳಿಂದ ದಿನಕ್ಕೆ 60 ಸಾವಿರಕ್ಕೂ ಹೆಚ್ಚು ಮಂದಿ ಚೇತರಿಸಿಕೊಳ್ಳುತ್ತಿದ್ದಾರೆ. ಚೇತರಿಕೆ ಪ್ರಮಾಣ ಶೇ 77.15ರಷ್ಟಿದೆ.

ಆಂಧ್ರ ಪ್ರದೇಶದಲ್ಲಿ ಶುಕ್ರವಾರ ಒಂದೇ ದಿನ 10,776 ಪ್ರಕರಣಗಳು ದೃಢಪಟ್ಟಿದ್ದು, 76 ಸಾವು ಸಂಭವಿಸಿದೆ. ಇದರೊಂದಿಗೆ ಅಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 4,76,506 ತಲುಪಿದ್ದು, ಈವರೆಗೆ 3,70,163 ಮಂದಿ ಚೇತರಿಸಿಕೊಂಡಿದ್ದಾರೆ. 4,276 ಸಾವು ಸಂಭವಿಸಿದೆ. ಸದ್ಯ 1,02,067 ಸಕ್ರಿಯ ಪ್ರಕರಣಗಳಿವೆ.

ತಮಿಳುನಾಡಿನಲ್ಲಿ 5,976 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 79 ಮಂದಿ ಮೃತಪಟ್ಟಿದ್ದಾರೆ. ಸದ್ಯ 51,633 ಸಕ್ರಿಯ ಪ್ರಕರಣಗಳಿವೆ.

ದೆಹಲಿಯಲ್ಲಿ 2,914 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 13 ಮಂದಿ ಅಸುನೀಗಿದ್ದಾರೆ. ಈವರೆಗಿನ ಒಟ್ಟು ಪ್ರಕರಣಗಳ ಸಂಖ್ಯೆ 1,85,220 ತಲುಪಿದೆ. ಸದ್ಯ 18,842 ಪ್ರಕರಣಗಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT