ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India update: 50 ಸಾವಿರ ದಾಟಿದ ಸಕ್ರಿಯ ಪ್ರಕರಣಗಳು

Last Updated 14 ಜೂನ್ 2022, 5:52 IST
ಅಕ್ಷರ ಗಾತ್ರ

ನವದೆಹಲಿ:ದೇಶದಾದ್ಯಂತ ಮಂಗಳವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್‌–19 ದೃಢಪಟ್ಟ 6,594 ಹೊಸ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಒಟ್ಟು ಸಂಖ್ಯೆ 50,548ಕ್ಕೆ ಏರಿಕೆಯಾಗಿದೆ.

24 ಗಂಟೆಗಳಲ್ಲಿ ಸಕ್ರಿಯ ಪ್ರಕರಣಗಳ ಸಾಲಿಗೆ 2,553 ಪ್ರಕರಣಗಳು ಸೇರ್ಪಡೆಯಾಗಿವೆ. ನಿತ್ಯದ ಕೋವಿಡ್ ದೃಢ ಪ್ರಮಾಣ ಶೇಕಡ 2.05ರಷ್ಟಿದ್ದು, ವಾರದ ಕೋವಿಡ್‌ ದೃಢ ಪ್ರಮಾಣ ಶೇಕಡ 2.32ರಷ್ಟಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದು ಬಂದಿದೆ.

ಕೋವಿಡ್‌ ಒಟ್ಟು ಪ್ರಕರಣಗಳ ಸಂಖ್ಯೆ 4,32,36,695ಕ್ಕೆ ಏರಿಕೆಯಾಗಿದೆ. ಕೊರೊನಾ ವೈರಸ್‌ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವರ ಪ್ರಮಾಣ ಶೇಕಡ 98.67ರಷ್ಟಿದೆ ಹಾಗೂ ಸಾವಿನ ಪ್ರಮಾಣ ಶೇಕಡ 1.21ರಷ್ಟಿದೆ.

ದೇಶದಲ್ಲಿ ಒಟ್ಟು 195.35 ಡೋಸ್‌ ಕೋವಿಡ್‌ ಲಸಿಕೆಯನ್ನು ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT