ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ದೇಶದಾದ್ಯಂತ 85.62 ಲಕ್ಷ ಮಂದಿ ಗುಣಮುಖ

Last Updated 23 ನವೆಂಬರ್ 2020, 4:43 IST
ಅಕ್ಷರ ಗಾತ್ರ

ನವದೆಹಲಿ: ಸೋಮವಾರ ಬೆಳಗ್ಗಿನ ವರೆಗೂ ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಕೋವಿಡ್‌–19 ದೃಢಪಟ್ಟ 44,059 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 511 ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ ಒಟ್ಟು 91,39,866 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 85,62,642 ಮಂದಿ ಗುಣಮುಖರಾಗಿದ್ದಾರೆ ಹಾಗೂ 1,33,738 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ 4,43,486 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 41,024 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಐಸಿಎಂಆರ್‌ ಪ್ರಕಾರ, ದೇಶದಲ್ಲಿ ಒಟ್ಟು 13,25,82,730 ಗಂಟಲು ದ್ರವ ಮಾದರಿಗಳಿಗೆ ಕೋವಿಡ್‌ –19 ಪರೀಕ್ಷೆ ಮಾಡಲಾಗಿದೆ. ಭಾನುವಾರ ಒಂದೇ ದಿನ 8,49,596 ಮಾದರಿಗಳಿಗೆ ಪರೀಕ್ಷೆ ನಡೆಸಲಾಗಿದೆ.

ಮಹಾರಾಷ್ಟ್ರದಲ್ಲಿ 82,521 ಸಕ್ರಿಯ ಪ್ರಕರಣಗಳು, ಕೇರಳದಲ್ಲಿ 65,982, ದೆಹಲಿಯಲ್ಲಿ 40,212 ಹಾಗೂ ಪಶ್ಚಿಮ ಬಂಗಾಳದಲ್ಲಿ 25,207 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT