ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ದೆಹಲಿಯಲ್ಲಿ 5,246 ಹೊಸ ಪ್ರಕರಣ

Last Updated 25 ನವೆಂಬರ್ 2020, 16:34 IST
ಅಕ್ಷರ ಗಾತ್ರ
ADVERTISEMENT
""

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೆಹಲಿಯಾದ್ಯಂತ 5,246 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, 99 ಜನರು ಮೃತಪಟ್ಟಿದ್ದಾರೆ. ಈ ವರೆಗೂ ಒಟ್ಟು 5,45,787 ಪ್ರಕರಣಗಳು ಬೆಳಕಿಗೆ ಬಂದಿದ್ದು, ಸಾವಿನ ಸಂಖ್ಯೆ 8,720ಕ್ಕೆ ತಲುಪಿದೆ.

ಭಾರತದಲ್ಲಿ ಕೊರೊನಾ ಸೋಂಕಿನ ಕೇಂದ್ರಬಿಂದುವೆಂದೇ ಪರಿಗಣಿಸಲ್ಪಟ್ಟಿರುವ ಮಹಾರಾಷ್ಟ್ರದಲ್ಲಿ 6,159 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಂದೇ ದಿನದಲ್ಲಿ 65 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ. ಈ ವರೆಗೂ ಮಹಾರಾಷ್ಟ್ರದಾದ್ಯಂತ ಒಟ್ಟು 17,95,959 ಪ್ರಕರಣಗಳು ದಾಖಲಾಗಿದ್ದು, ಒಟ್ಟು 46,748 ಸೋಂಕಿತರು ಸಾವಿಗೀಡಾಗಿದ್ದಾರೆ.

ಪಂಜಾಬ್‌ನಲ್ಲಿ 785 ಹೊಸ ಪ್ರಕರಣಗಳು ದಾಖಲಾಗಿದ್ದು, 31 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ. 7,129 ಸಕ್ರಿಯ ಪ್ರಕರಣಗಳಿದ್ದು, ಈ ವರೆಗೆ ಒಟ್ಟು 1,36,622 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಕಳೆದ 24 ಗಂಟೆಗಳಲ್ಲಿ ರಾಜಸ್ಥಾನದಾದ್ಯಂತ 3,285 ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, 18 ಸೋಂಕಿತರು ಸಾವಿಗೀಡಾಗಿದ್ದಾರೆ.

ಬುಧವಾರ ಬೆಳಗ್ಗಿನ ವರೆಗೂ ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಕೋವಿಡ್‌–19 ದೃಢಪಟ್ಟ 44,376 ಹೊಸ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 92,22,217ಕ್ಕೆ ಏರಿಕೆಯಾಗಿದೆ.

ಒಟ್ಟು ಪ್ರಕರಣಗಳ ಪೈಕಿ 86,42,771 ಮಂದಿ ಗುಣಮುಖರಾಗಿದ್ದಾರೆ ಹಾಗೂ 1,34,699 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ 4,44,746 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 37,816 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಹಾಗೂ ಇದೇ ಅವಧಿಯಲ್ಲಿ 481 ಮಂದಿ ಮೃತಪಟ್ಟಿರುವುದು ಕೇಂದ್ರ ಆರೋಗ್ಯ ಇಲಾಖೆ ಪ್ರಕಟಣೆಯಿಂದ ತಿಳಿದು ಬಂದಿದೆ.

ಐಸಿಎಂಆರ್‌ ಪ್ರಕಾರ, ದೇಶದಲ್ಲಿ ಒಟ್ಟು 13,48,41,307 ಗಂಟಲು ದ್ರವ ಮಾದರಿಗಳಿಗೆ ಕೋವಿಡ್‌ –19 ಪರೀಕ್ಷೆ ಮಾಡಲಾಗಿದೆ. ಮಂಗಳವಾರ ಒಂದೇ ದಿನ 11,59,032 ಮಾದರಿಗಳಿಗೆ ಪರೀಕ್ಷೆ ನಡೆಸಲಾಗಿದೆ.

ಮಹಾರಾಷ್ಟ್ರದಲ್ಲಿ 84,238 ಸಕ್ರಿಯ ಪ್ರಕರಣಗಳು, ಕೇರಳದಲ್ಲಿ 64,539, ದೆಹಲಿಯಲ್ಲಿ 38,501 ಹಾಗೂ ಪಶ್ಚಿಮ ಬಂಗಾಳದಲ್ಲಿ 24,880 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT