ಬುಧವಾರ, ಜನವರಿ 20, 2021
29 °C

Covid-19 India Update: 44,489 ಹೊಸ ಪ್ರಕರಣ, 524 ಮಂದಿ ಸಾವು

ಎಎನ್‌ಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 44,489 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 524 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 92,66,706 ಕ್ಕೆ ಏರಿಕೆಯಾಗಿದೆ. ಆ ಪೈಕಿ 1,35,223 ಮಂದಿ ಸಾವಿಗೀಡಾಗಿದ್ದಾರೆ. ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದುವರೆಗೆ 86,79,138 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 4,52,344 ಸಕ್ರಿಯ ಪ್ರಕರಣಗಳಿವೆ.

ಹೆಚ್ಚು ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 17,95,959 ಪ್ರಕರಣಗಳು ದೃಢಪಟ್ಟಿದ್ದು, ಆ ಪೈಕಿ 46,748 ಮಂದಿ ಕೊನೆಯುಸಿರೆಳೆದಿದ್ದಾರೆ. ಸದ್ಯ 85,488 ಪ್ರಕರಣಗಳಿವೆ. ಕೇರಳದಲ್ಲಿ 65,234, ಕರ್ನಾಟಕದಲ್ಲಿ 24,909, ರಾಜಸ್ಥಾನದಲ್ಲಿ 26,320, ದೆಹಲಿಯಲ್ಲಿ 38,287, ಉತ್ತರ ಪ್ರದೇಶದಲ್ಲಿ 24,876, ಪಶ್ಚಿಮ ಬಂಗಾಳದಲ್ಲಿ 24,752 ಸಕ್ರಿಯ ಪ್ರಕರಣಗಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು