ಸೋಮವಾರ, ಜನವರಿ 17, 2022
21 °C

Covid-19 Karnataka: ರಾಜ್ಯದಲ್ಲಿ 1,290 ಹೊಸ ಪ್ರಕರಣಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದಲ್ಲಿ 24 ಗಂಟೆಗಳ ಅಂತರದಲ್ಲಿ ಕೋವಿಡ್‌–19 ದೃಢಪಟ್ಟ 1,290 ಹೊಸ ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ ಐದು ಮಂದಿ ಸಾವಿಗೀಡಾಗಿರುವುದು ಆರೋಗ್ಯ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ.

ಬೆಂಗಳೂರು ನಗರದಲ್ಲಿ 1,041 ಹೊಸ ಪ್ರಕರಣಗಳು, ದಕ್ಷಿಣ ಕನ್ನಡದಲ್ಲಿ 52 ಮತ್ತು ಉಡುಪಿಯಲ್ಲಿ 43 ಪ್ರಕರಣಗಳು ದಾಖಲಾಗಿವೆ.

ಕೋವಿಡ್‌ ದೃಢ ಪ್ರಮಾಣ ಶೇಕಡ 1.60ರಷ್ಟಿದೆ ಹಾಗೂ ಸೋಂಕಿನಿಂದ ಸಾವಿಗೀಡಾಗುತ್ತಿರುವವರ ಪ್ರಮಾಣ ಶೇಕಡ 0.38ರಷ್ಟು ದಾಖಲಾಗಿದೆ. ಒಟ್ಟು 77 ಓಮೈಕ್ರಾನ್‌ ಪ್ರಕರಣಗಳಿವೆ.

ರಾಜ್ಯದಲ್ಲಿ ಒಟ್ಟು 11,345 ಸಕ್ರಿಯ ಪ್ರಕರಣಗಳಿದ್ದು, ಸೋಮವಾರ ಸೋಂಕಿನಿಂದ 232 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ ದೃಢಪಟ್ಟ ಒಟ್ಟು ಸಂಖ್ಯೆ 30,10,847ಕ್ಕೆ ಏರಿಕೆಯಾಗಿದ್ದು, ಈವರೆಗೂ ಕೋವಿಡ್‌ ಕಾರಣಗಳಿಂದಾಗಿ 38,351 ಮಂದಿ ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ:

ಇಂದಿನಿಂದ 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡುವ ಅಭಿಯಾನ ಆರಂಭವಾಗಿದ್ದು, ರಾಜ್ಯದಲ್ಲಿ ಮೊದಲ ದಿನ ಒಟ್ಟು 3.80 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಲಸಿಕೆ ಹಾಕಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು