ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಮತ್ತೊಂದು ವಾರ ಕೋವಿಡ್‌ ಲಾಕ್‌ಡೌನ್‌ ವಿಸ್ತರಣೆ: ಕೇಜ್ರಿವಾಲ್‌

Last Updated 23 ಮೇ 2021, 7:56 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌ ನಿಯಂತ್ರಣಕ್ಕಾಗಿ ದೆಹಲಿಯಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್‌ ಮೇ 31ರ ವರೆಗೂ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಹೇಳಿದ್ದಾರೆ.

ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ ಕೋವಿಡ್‌–19 ದೃಢಪಟ್ಟ 1,600 ಹೊಸ ಪ್ರಕರಣಗಳು ದಾಖಲಾಗಿವೆ. ಕೋವಿಡ್ ಪಾಸಿಟಿವ್‌ ಪ್ರಮಾಣ ಶೇ 2.5ಕ್ಕಿಂತ ಕಡಿಮೆಯಾಗಿದೆ. ಪ್ರಕರಣಗಳ ಸಂಖ್ಯೆ ಇಳಿಮುಖವಾಗಿ ಮುಂದುವರಿದರೆ, ಮೇ 31ರಿಂದ ಹಂತ ಹಂತವಾಗಿ ಲಾಕ್‌ಡೌನ್‌ ಸಡಿಲಗೊಳಿಸುವ ಪ್ರಕ್ರಿಯೆ ಆರಂಭಿಸಲಾಗುತ್ತದೆ ಎಂದು ಕೇಜ್ರಿವಾಲ್‌ ಹೇಳಿದ್ದಾರೆ.

'ಹಲವು ಜನರನ್ನು ನಾನು ಸಂಪರ್ಕಿಸಿದ್ದೇನೆ ಹಾಗೂ ಬಹುತೇಕ ಒಂದು ವಾರ ಲಾಕ್‌ಡೌನ್‌ ವಿಸ್ತರಣೆಗೆ ಅಭಿಪ್ರಾಯ ವ್ಯಕ್ತವಾಗಿದೆ. ಹಾಗಾಗಿ, ಮೇ 31ರ ಬೆಳಿಗ್ಗೆ 5ರ ವರೆಗೂ ಲಾಕ್‌ಡೌನ್‌ ವಿಸ್ತರಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ' ಎಂದಿದ್ದಾರೆ.

ದೆಹಲಿಯಲ್ಲಿ ಕೋವಿಡ್‌ ಲಸಿಕೆ ಲಭ್ಯತೆಗಾಗಿ ಲಸಿಕೆ ತಯಾರಿಕ ಕಂಪನಿಗಳೊಂದಿಗೆ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ. ಲಸಿಕೆಗಾಗಿ ಯಾವುದೇ ಮೊತ್ತವನ್ನು ಭರಿಸಲು ಸಿದ್ಧರಿದ್ದೇವೆ, ಈಗ ಸಾಧಿಸಿರುವ ಪರಿಸ್ಥಿತಿಯನ್ನು ಉಳಿಸಿಕೊಳ್ಳಲು ಲಾಕ್‌ಡೌನ್‌ ಅವಶ್ಯವಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT