ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌–19: ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್‌ ರಾವತ್‌ ಆಸ್ಪತ್ರೆಗೆ ದಾಖಲು

Last Updated 27 ಡಿಸೆಂಬರ್ 2020, 16:48 IST
ಅಕ್ಷರ ಗಾತ್ರ

ಡೆಹ್ರಾಡೂನ್: ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್‌ ರಾವತ್‌ (60) ಅವರು ಭಾನುವಾರ ಸಂಜೆ ಡೂನ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಿಸೆಂಬರ್‌ 18ರಂದು ಅವರಿಗೆ ಕೋವಿಡ್‌–19 ದೃಢಪಟ್ಟಿತ್ತು.

ಅವರಿಗೆ ಜ್ವರ ಕಾಣಿಸಿಕೊಂಡಿದ್ದರಿಂದ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.

ರಾವತ್‌ ಅವರಿಗೆ ಕೋವಿಡ್‌ ದೃಢಪಟ್ಟ ನಂತರದಿಂದ ಅವರು ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿದ್ದರು. ಆಗಸ್ಟ್‌ನಲ್ಲಿ ಅವರ ಅಧಿಕಾರಿಗಳಲ್ಲಿ ಮೂವರಿಗೆ ಕೋವಿಡ್‌ ದೃಢಪಟ್ಟಾಗಲೂ ಪ್ರತ್ಯೇಕವಾಸದಲ್ಲಿದ್ದರು.

ಉತ್ತರಾಖಂಡದಲ್ಲಿ ಈವರೆಗೂ 89,000 ಕೋವಿಡ್‌ ಪ್ರಕರಣಗಳು ದಾಖಲಾಗಿವೆ ಹಾಗೂ 1,483 ಮಂದಿ ಮೃತಪಟ್ಟಿದ್ದಾರೆ. ಡೆಹ್ರಾಡೂನ್‌ನಲ್ಲೇ 26,806 ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT