ಗುರುವಾರ , ಜೂನ್ 24, 2021
25 °C

ಕೋವಿಡ್‌ ಬಿಕ್ಕಟ್ಟಿನ ಸಂದರ್ಭದಲ್ಲಿ ಕಷ್ಟದಲ್ಲಿರುವವರಿಗೆ ಸಹಾಯ ಮಾಡಿ: ರಾಹುಲ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಕೋವಿಡ್‌ ಪಿಡುಗಿನ  ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಕಷ್ಟದಲ್ಲಿ ಸಿಲುಕಿರುವವರಿಗೆ ಸಹಾಯ ಮಾಡಿ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಂಗಳವಾರ ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಈ ಬಿಕ್ಕಟ್ಟಿನ ಸಮಯದಲ್ಲಿ ನಮ್ಮ ದೇಶಕ್ಕೆ ಸಹಾಯ ಹಸ್ತದ ಅವಶ್ಯಕತೆ ಇದೆ. ಜೀವಗಳನ್ನು ಉಳಿಸಲು ನಮ್ಮಿಂದಾಗುವ ಎಲ್ಲಾ ಸಹಾಯವನ್ನು ಮಾಡೋಣ. ಕೊರೊನಾ ವೈರಸ್‌ ವಿರುದ್ಧದ ಹೋರಾಟವನ್ನು ಇನ್ನಷ್ಟು ಬಲಿಷ್ಠಗೊಳಿಸಲು ‘ಸ್ಪೀಕ್‌ ಅಪ್‌ ಟು ಸೇವ್‌ ಲೈವ್ಸ್‌’ ಅಭಿಯಾನದೊಂದಿಗೆ ಕೈ ಜೋಡಿಸಿ’ ಎಂದು ಅವರು ಕೇಳಿಕೊಂಡಿದ್ದಾರೆ.

ಇದರೊಂದಿಗೆ ಆಮ್ಲಜನಕ, ಹಾಸಿಗೆ ಮತ್ತು ವೆಂಟಿಲೇಟರ್‌ ಕೊರತೆಗೆ ಸಂಬಂಧಿಸಿದ ಸಣ್ಣ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಕಾಂಗ್ರೆಸ್‌ ಪಕ್ಷವು ಜನರಿಗೆ ನೆರವನ್ನು ಒದಗಿಸುವ ನಿಟ್ಟಿನಲ್ಲಿ ಎಐಸಿಸಿಯ ಮುಖ್ಯ ಕಚೇರಿ ಮತ್ತು ಪ್ರದೇಶ ಕಾಂಗ್ರೆಸ್‌ ಸಮಿತಿಯ(ಪಿಸಿಸಿ) ಕಚೇರಿಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು