ಶನಿವಾರ, ಜೂನ್ 25, 2022
27 °C

ಮಹಾರಾಷ್ಟ್ರ: ನಾಳೆಯಿಂದ 18 ಜಿಲ್ಲೆಗಳಲ್ಲಿ ಕೋವಿಡ್ ನಿರ್ಬಂಧ ತೆರವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆ ಹಾಗೂ ಆಮ್ಲಜನಕ ಹಾಸಿಗೆಗಳ ಅಗತ್ಯವು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿರುವ ಕಾರಣ ಮಹಾರಾಷ್ಟ್ರದ 18 ಜಿಲ್ಲೆಗಳಲ್ಲಿ ಶುಕ್ರವಾರದಿಂದ (ಜೂನ್ 4) ಕೋವಿಡ್‌ ನಿರ್ಬಂಧಗಳನ್ನು ತೆಗೆದುಹಾಕಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರವು ಗುರುವಾರ ತಿಳಿಸಿದೆ.

ಗುರುವಾರ ನಡೆದ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಪತ್ತು ನಿರ್ವಹಣಾ ಸಚಿವ ವಿಜಯ್ ವಾಡೆಟ್ಟಿವಾರ್ ಅವರು, ರಾಜಧಾನಿ ಮುಂಬೈನಲ್ಲಿ ನಿರ್ಬಂಧಗಳನ್ನು ಭಾಗಶಃ ಸಡಿಲಗೊಳಿಸಲಾಗುವುದು. ಆದರೆ, ಸ್ಥಳೀಯ ರೈಲು ಪ್ರಯಾಣ ಸೇರಿದಂತೆ ಇನ್ನಿತರ ದೈನಂದಿನ ಚಟುವಟಿಕೆಗಳು ಸಾರ್ವಜನಿಕರಿಗೆ ಮುಕ್ತವಾಗಿರುವುದಿಲ್ಲ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಕೋವಿಡ್ ಎರಡನೇ ಅಲೆ ತೀವ್ರವಾದಾಗ ಲಾಕ್‌ಡೌನ್ ಮಾದರಿಯ ನಿರ್ಬಂಧಗಳನ್ನು ಏಪ್ರಿಲ್‌ನಲ್ಲಿ ಜಾರಿಗೊಳಿಸಲಾಗಿತ್ತು. ಕೋವಿಡ್ ಪ್ರಕರಣಗಳ ಸಂಖ್ಯೆ ಶೇ 5ರಷ್ಟು ಅಥವಾ ಅದಕ್ಕಿಂತ ಕಮ್ಮಿ ಇರುವ ಜಿಲ್ಲೆಗಳು ಹಾಗೂ ಶೇ 25ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಆಮ್ಲಜನಕ ಹಾಸಿಗೆಗಳ ಅಗತ್ಯವು ಕಮ್ಮಿ ಇರುವ 18 ಜಿಲ್ಲೆಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ತೆರವುಗೊಳಿಸಲಾಗುವುದು ಎಂದು ಸಚಿವ ವಿಜಯ್ ತಿಳಿಸಿದ್ದಾರೆ.

ಇದನ್ನೂ ಓದಿ– ದುರಹಂಕಾರದ ಚಂಡಮಾರುತ ಇನ್ನೂ ಬಂಗಾಳಕೊಲ್ಲಿಯಲ್ಲಿ ಸುಳಿದಾಡುತ್ತಿದೆ: ಶಿವಸೇನಾ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು