ನವದೆಹಲಿ: ದೆಹಲಿಯಲ್ಲಿ 10 ದಿನಗೊಳಗೆ ಕೋವಿಡ್ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುತ್ತೇವೆ. ಅದಕ್ಕಾಗಿ ಬೇಕಾಗಿರುವ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಹೇಳಿದರು.

‘ಕಳೆದ ಕೆಲವು ದಿನಗಳಿಂದ ಪ್ರಕರಣಗಳು ಹೆಚ್ಚುತ್ತಿದೆ. ಈ ಬಗ್ಗೆ ನನಗೆ ಕಾಳಜಿ ಇದೆ. ಕೊರೊನಾ ಸೋಂಕು ನಿಯಂತ್ರಿಸಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದೇನೆ. ಮುಂದಿನ ವಾರ ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳಲಿದ್ದೇವೆ. ಏಳರಿಂದ ಹತ್ತು ದಿನಗಳೊಳಗೆ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತೇವೆ’ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ದೆಹಲಿಯಲ್ಲಿ ಹೆಚ್ಚಿದ ಮಾಲಿನ್ಯವು ಕೊರೊನಾ ಸೋಂಕು ಏರಲು ಪ್ರಮುಖ ಕಾರಣ. ಅ.20 ತನಕ ಪರಿಸ್ಥಿತಿ ನಿಯಂತ್ರಣದಲ್ಲಿತ್ತು. ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯು ದೆಹಲಿಯ 24 ಗ್ರಾಮಗಳ ಶೇ.70–95ರಷ್ಟು ಕೊಳತ ಕೃಷಿ ತ್ಯಾಜ್ಯಗಳ ನಿರ್ವಹಣೆಗೆ ಪರಿಹಾರವನ್ನು ಕಂಡು ಹಿಡಿದಿದೆ’ ಎಂದು ಅವರು ಮಾಹಿತಿ ನೀಡಿದರು.

ದೆಹಲಿಯಲ್ಲಿ ಗುರುವಾರ 7,053 ಹೊಸ ಪ್ರಕರಣಗಳು ವರದಿಯಾಗಿದ್ದು, ಈವರೆಗೆ 4.67 ಲಕ್ಷ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 104 ಮಂದಿ ಮೃತಪಟ್ಟಿದ್ದಾರೆ. ಒಟ್ಟು 7,332 ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.